ನಿಪ್ಪಾಣಿ, ೭ : ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಯುವಕ ಡೆಂಗಿ ಜ್ವರಕ್ಕೆ ಬಲಿಯಾಗಿದ್ದಾರೆ.
ಡೆಂಗಿ ಜ್ವರದಿಂದ ಬಳಲುತ್ತಿದ್ದ ನಿಪ್ಪಾಣಿ ಪ್ರಗತಿ ನಗರದ ಸೌರಭ ರಾಜು ಮಾನೆ ಅವರನ್ನು ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆಯಾದ ಕಾರಣ ಕೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.
ಎಂಟು ದಿನಗಳಿಂದ ಅವರು ಡೆಂಗಿ ಜ್ವರದಿಂದ ಬಳಲುತ್ತಿದ್ದರು. ಹಾಗಾಗಿ ಉತ್ತಮ ಚಿಕಿತ್ಸೆಗೆಂದು ಕೊಲ್ಹಾಪುರ ಆಸ್ಪತ್ರೆಯಲ್ಲಿ ಸೇರಿಸಲಾಗಿತ್ತು, ಚಿಕಿತ್ಸೆ ಫಲಿಸದೇ ಗುರುವಾರ ಅಸುನೀಗಿದರು.
ಕೇವಲ ಮೂರು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಅವರ ಮತ್ತು ಅವರ ಪತ್ನಿಯ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.