Please assign a menu to the primary menu location under menu

Local News

ರೈತರ ಖಾತೆಗೆ ರೂ.17.01 ಕೋಟಿ ಬೆಳೆ ಹಾನಿ ಪರಿಹಾರ ವಿತರಣೆ

dc

ಬೆಳಗಾವಿ : ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿದ್ದ ಬೆಳೆಹಾನಿಯ ಕುರಿತು ತಕ್ಷಣವೇ ಜಂಟಿ‌ ಸಮೀಕ್ಷೆ ಕೈಗೊಂಡು 11,234 ರೈತರಿಗೆ ಒಟ್ಟಾರೆ 17.01 ಕೋಟಿ ರೂಪಾಯಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಜುಲೈ ಹಾಗೂ ಆಗಸ್ಟ್ ಮಾಹೆ ಸೇರಿದಂತೆ ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಯಾಗಿತ್ತು.
ತಕ್ಷಣವೇ ಕಾರ್ಯಪ್ರವೃತ್ತಗೊಂಡ ಜಿಲ್ಲಾಡಳಿತವು ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆಯನ್ನು ಕೈಗೊಂಡು ಅತ್ಯಂತ ತ್ವರಿತವಾಗಿ ರೈತರಿಗೆ ಪರಿಹಾರ ಒದಗಿಸಿದೆ. ಜಿಲ್ಲೆಯಲ್ಲಿ ಹೆಸರು, ಮೆಕ್ಕೆಜೋಳ, ಹತ್ತಿ, ಸೂರ್ಯಕಾಂತಿ, ಸೋಯಾಬಿನ್ ಮತ್ತಿತರ ಬೆಳೆಹಾನಿಯಾಗಿತ್ತು.

ಜಂಟಿ ಸಮೀಕ್ಷೆ ಆಧರಿಸಿ ಸರಕಾರದ‌ ಮಾರ್ಗಸೂಚಿ ಪ್ರಕಾರ ಆಯಾ ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆಹಾನಿ ಪರಿಹಾರವನ್ನು ಬಿಡುಗಡೆಗೊಳಿಸಲಾಗಿದ್ದು, ನಾಳೆಯೇ ರೈತರ ಖಾತೆಗೆ ಹಣ ಜಮೆಯಾಗಲಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ತಿಳಿಸಿದ್ದಾರೆ.

ಜಿಲ್ಲೆಯ ಒಟ್ಟು 11,234 ರೈತರ ಖಾತೆಗೆ ಒಟ್ಟಾರೆ 17,01,01,195 ರೂಪಾಯಿ ಜಮೆಯಾಗಲಿದೆ ಎಂದು ಅವರು ಹೇಳಿದ್ದಾರೆ.


Samadarshi News

Leave a Reply