This is the title of the web page

ಪ್ರೇಮಿಗಾಗಿ ಐವರನ್ನು ಕೊಂದಿದ್ದ ಮಹಿಳೆಯ ಬಂಧನ

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

ಮಂಡ್ಯ, 9- ಬೆಚ್ಚಿಬೀಳಿಸಿದ್ದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‍ಎಸ್‍ನ ಬಜಾರ್ ಲೈನ್ ಬಡಾವಣೆಯಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಐವರನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆಯನ್ನು ಪೊಲೀಸರು ಎರಡೇ ದಿನದಲ್ಲಿ ಭೇದಿಸಿ ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ.

ಮಂಡ್ಯದ ಕೆಆರ್ ಎಸ್‍ನ ಬಜಾರ್ ಲೈನ್ ಬಡಾವಣೆಯಲ್ಲಿ ಗಂಗಾರಾಮ ಎಂಬವರ ಪತ್ನಿ ಲಕ್ಷ್ಮೀ (32), ಹಾಗೂ ಮಕ್ಕಳಾದ ರಾಜ್ (13), ಕೋಮಲ್ (7), ಕುನಾಲ್ (4), ಗೋವಿಂದ (8) ಅವರನ್ನು ಫೆಬ್ರವರಿ 6ರಂದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು.

ಈ ಮುಗ್ಧ ಜೀವಗಳ ಕೊಲೆಗೆ ಗಂಡ ಗಂಗಾರಾಮನ ಪ್ರೇಮಿಯೇ ಕಾರಣ ಎಂದು ವಿಚಾರಣೆ ವೇಳೆ ಗೊತ್ತಾಗಿದೆ. ಗಂಗಾರಾಮ್ ಸಂಬಂಧಿ ಲಕ್ಷ್ಮೀ (34) ಎಂಬಾಕೆ ಗಂಗಾರಾಮನನ್ನು ಪ್ರೇಮಿಸುತ್ತಿದ್ದಳು ಹಾಗೂ ತನ್ನನ್ನು ಮದುವೆಯಾಗುವಂತೆ ಅವನನ್ನು ಪೀಡಿಸುತ್ತಿದ್ದಳು. ಆದರೆ ಮನೆಯವರ ಒತ್ತಾಯಕ್ಕೆ ಮಣಿದು ಗಂಗಾರಾಮನು ಅದೇ ಹೆಸರಿನ ಲಕ್ಷ್ಮೀ ಎಂಬವಳನ್ನು ಮದುವೆಯಾಗಿದ್ದ.

ಆತ ತನ್ನ ಹೆಂಡತಿ ಮಕ್ಕಳನ್ನು ತೊರೆದು ತನ್ನನ್ನು ಮದುವೆಯಾಗು ಎಂದು ಪೀಡಿಸುತ್ತಿದ್ದಳು. ಗಂಗಾರಾಮನ ಹೆಂಡತಿ, ಮಕ್ಕಳನ್ನು ಕೊಲೆ ಮಾಡಿದರೆ ನನಗೆ ಗಂಗಾರಾಮ ಸುಲಭವಾಗಿ ತನಗೆ ಸಿಗುತ್ತಾನೆ ಎಂದು ಫೆಬ್ರವರಿ 5ರ ರಾತ್ರಿ ಗಂಗಾರಾಮನ ಮನೆಗೆ ಬಂದು ಎಲ್ಲರ ಜೊತೆಯಲ್ಲಿ ಊಟಮಾಡಿ ಅಲ್ಲಿಯೇ ಮಲಗಿದ್ದಾಳೆ. ಎಲ್ಲರೂ ನಿದ್ರೆಗೆ ಜಾರಿದ ಬಳಿಕ ಎಲ್ಲರನ್ನೂ ಹತ್ಯೆ ಮಾಡಿದ್ದಾಳೆ. ಊಟದಲ್ಲಿ ಮತ್ತು ಬೆರೆಸಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗುತ್ತಿದೆ. ತಾನು ತಂದಿದ್ದ ಸುತ್ತಿಗೆಯಿಂದ ಮೊದಲು ಲಕ್ಷ್ಮೀಗೆ ಬಡಿದು ಕೊಲೆ ಮಾಡಿದ್ದಾಳೆ. ನಂತರ ಎಚ್ಚರಗೊಂಡ ಮಕ್ಕಳ ಮೇಲೂ ಸುತ್ತಿಗೆಯಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾಳೆ ಎಂದು ವಿಚಾರಣೆಯಲ್ಲಿ ಆಕೆ ಬಾಯ್ಬಿಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಬೆಳಗಿನ ಜಾವ 4ಗಂಟೆ ಸಮಯದಲ್ಲಿ ಕೆಆರ್‍ಎಸ್‍ನಿಂದ ಬಸ್ ಮೂಲಕ ಮೈಸೂರಿಗೆ ಪ್ರಯಾಣ ಮಾಡಿ, ಬೆಳಿಗ್ಗೆ 10 ಗಂಟೆ ಸುಮಾರಿಗೆ ತನಗೆ ಏನೂ ಗೊತ್ತಿಲ್ಲ ಎಂಬಂತೆ ಕೊಲೆ ಸ್ಥಳಕ್ಕೆ ಮತ್ತೆ ಬಂದು ಮೃತರ ಮನೆ ಮುಂದೆ ಕುಳಿತು ಕಣ್ಣೀರು ಹಾಕಿ ನಾಟಕ ಮಾಡಿದ್ದಳು. ಕ್ಯಾಮೆರಾ ಕಂಡು ಮುಖ ಮುಚ್ಚಿಕೊಂಡು ಕ್ಯಾಮೆರಾ ದೂರ ತೆಗೆದುಕೊಂಡು ಹೋಗಿ ಎಂದು ಚೀರಾಡಿದ್ದಳು. ಆದರೆ ಪೊಲೀಸರಿಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ವಿಷಯ ಬಾಯ್ಬಿಟ್ಟಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

You might also like
Leave a comment