ಬೆಂಗಳೂರು : ಕಚೇರಿಯಲ್ಲಿಯೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಇಂತಹ ಘಟನೆ ಯಾರಿಗೂ ಗೌರವ ತರಲ್ಲ. ಅವರು ಎಷ್ಟೇ ದೊಡ್ಡವರಾಗಿದ್ದರೂ ಅವರ ವಿರುದ್ಧ ಮುಲಾಜಿಲ್ಲದೇ ಕ್ರಮವಾಗುತ್ತದೆ ಎಂದರು.
ಅನಾರೋಗ್ಯ ಕಾರಣದಿಂದ ನಿನ್ನೆ ವಿಶ್ರಾಂತಿಯಲ್ಲಿದ್ದೆ. ಮಧ್ಯಾಹ್ನ ಊಟಕ್ಕೆ ಎದ್ದಾಗ ಅಧಿಕಾರಿಗಳು ವಿಷಯ ಹೇಳಿದರು. ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ಮುಖ್ಯಮಂತ್ರಿಗಳ ಜೊತೆ ಮಾತನಾಡಿದೆ. ಇದು ಪೊಲೀಸ್ ಇಲಾಖೆಗೆ ಮಾತ್ರವಲ್ಲ ಯಾವುದೇ ಇಲಾಖೆ ಕೂಡ ಇಂತಹ ಘಟನೆಯನ್ನು ಸಹಿಸಲು ಸಾಧ್ಯವಿಲ್ಲ. ಸಿಎಂ ಕೂಡ ಅಪ್ಸೆಟ್ ಆಗಿದ್ದಾರೆ. ಹಾಗಾಗಿ ಅವರು ಎಷ್ಟೇ ದೊಡ್ದವರಾಗಿದ್ದರೂ ಕ್ರಮ ಕೈಗೊಳ್ಳಲು ಆದೇಶ ನೀಡಿದೆ. ಇಂತಹ ಕಠಿಣ ಸನ್ನಿವೇಶದಲ್ಲಿ ನಾವು ಕಥಿಣವಾಗಿರಬೇಕು. ಹಾಗಾಗಿ ಅವರನ್ನು ಭೇಟಿ ಮಾಡಿಲ್ಲ ಎಂದರು.
ರಾಮಚಂದ್ರ ರಾವ್ ಬಂಧನವಾಗಬೇಕು ಎಂಬ ಬಿಜೆಪಿ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು ತಕ್ಷಣಕ್ಕೆ ಅವರನ್ನು ಅಮಾನತುಗೊಳಿಸಿದ್ದೇವೆ. ತನಿಖೆ ನಡೆಯಲಿದೆ. ತನಿಖೆ ಬಳಿಕ ಏನು ಬೇಕಾದರೂ ಆಗಬಹುದು. ಅವರು ಡಿಸ್ ಮಿಸ್ ಕೂಡ ಆಗಬಹುದು. ಯಾವ ಮುಲಾಜಿಲ್ಲ ಎಂದು ತಿಳಿಸಿದರು.



