ಹೊಸದಿಲ್ಲಿ: ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಮೇಲೆ ಸುಪ್ರೀಮ ಕೋರ್ಟನಲ್ಲಿ ವಿಭಿನ್ನ ತೀರ್ಪು ಪ್ರಕಟವಾಯಿತು.
ಓರ್ವ ನ್ಯಾಯಮೂರ್ತಿ ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿಯನ್ನು ವಜಾಗೊಳಿಸಿದರೆ, ಇನ್ನೋರ್ವರು ಹೈಕೋರ್ಟ ಆದೇಶವನ್ನು ರದ್ದು ಮಾಡಿದರು.
ಈ ಎರಡು ವಿಭಿನ್ನ ತೀರ್ಪಿನಿಂದ ಜನರಲ್ಲಿನ ಗೊಂದಲಕ್ಕೆ ಮತ್ತಷ್ಟು ನೀರೆರೆದಂತಾಗಿದೆ. ಇದೀಗ ಹಿಜಾಬ್ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.
ನ್ಯಾಯಪೀಠದ ಸದಸ್ಯ ನ್ಯಾಯಮೂರ್ತಿ ಹೇಮಂತ ಗುಪ್ತಾ ಅವರು ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿಯನ್ನು ವಜಾಗೊಳಿಸಿದರೆ, ಮತ್ತೋರ್ವ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹಿಬಾಜ್ ನಿಷೇಧ ಮಾಡಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದರು. ನ್ಯಾಯಮೂರ್ತಿಗಳಲ್ಲೇ ವಿಭಿನ್ನ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.
ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ಗೆ ಅವಕಾಶವಿಲ್ಲ. ಮುಂದಿನ ತೀರ್ಪು ಬರುವವರೆಗೂ ಹೈಕೋರ್ಟ ತೀರ್ಪನ್ನೇ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ.
ಸಿಜೆಐ ಪೀಠಕ್ಕೆ ಪ್ರಕರಣ ವರ್ಗಾವಣೆ ಆಗಿದ್ದು, ಮುಂದೆ ಸಿಜೆಐ ಅವರು ವಿಸ್ತ್ರತ ಪೀಠ ರಚನೆ ಮಾಡಲಿದ್ದು, ಅಲ್ಲಿ ಪ್ರಕರಣ ಇತ್ಯರ್ಥ ಆಗುವ ವರೆಗೂ ಹೈಕೋರ್ಟ ತೀರ್ಪನ್ನೇ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ.