ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ, ಪೂರ್ವ ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ.

A B Dharwadkar
ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ, ಪೂರ್ವ ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ.

ಹಾವೇರಿ:ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಟ್ಟಡದ ಉದ್ಘಾಟನೆ ಸಮಾರಂಭ ಇದೇ ಜನವರಿ ೭ ರಂದು ಜರುಗಲಿದ್ದು, ಮಾನ್ಯ ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದಲ್ಲೇ ಏಕಕಾಲಕ್ಕೆ ಮಂಜೂರಾದ ನಾಲ್ಕು ವೈದ್ಯಕೀಯ ಕಾಲೇಜುಗಳ ಪೈಕಿ ಹಾವೇರಿ ವೈದ್ಯಕೀಯ ಕಾಲೇಜು ಮಾದರಿಯಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ತಿಳಿಸಿದರು.
ಹಾವೇರಿ ವೈದಕೀಯ ಸಂಸ್ಥೆ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರೂ.೫೦೦ ಕೋಟಿಗೂ ಅಧಿಕ ಮೊತ್ತದ ವೆಚ್ಚದಲ್ಲಿ ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದರು.
*ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯ:* ಪ್ರಥಮ ವರ್ಷದ ತರಗತಿಯಿಂದ ೩ನೇ ವರ್ಷದ ತರಗತಿಗಳನ್ನು ಇದೇ ಕಟ್ಟಡದಲ್ಲಿ ನಡೆಸಲಾಗುತ್ತಿದೆ. ಎಲ್ಲ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉತ್ತಮ ತರಗತಿ ಕೊಠಡಿಗಳು, ಲ್ಯಾಬ್,ವಸತಿ, ಲಾಂಡ್ರಿ, ಸಾರಿಗೆ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ರಾಜ್ಯ ಮುಖ್ಯಮಂತ್ರಿಗಳು, ವಿವಿಧ ಸಚಿವರು, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಪ್ರಹ್ಲಾದ ಜೋಶಿ ಹಾಗೂ ಜಿಲ್ಲೆಯ ಸಂಸದರಾದ ಬಸವರಾಜ ಬೊಮ್ಮಾಯಿ, ಶಾಸಕರು ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
*ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ:* ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಮಾತನಾಡಿ, ಜ.೭ ರಂದು ಹಾವೇರಿ ವೈದ್ಯಕೀಯ ಕಾಲೇಜ್ ಕಟ್ಟಡ, ಅಂಗನವಾಡಿ ನೂತನ ಕಟ್ಟಡ, ಕರ್ಜಗಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಶಾಲಾ ಕಟ್ಟಡ, ಕನವಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿ, ಹಾವೇರಿಯ ಹೊಸ ಪ್ರವಾಸ ಮಂದಿರ, ನೆಲೋಗಲ್ ಹೊಸ ಪ್ರವಾಸ ಮಂದಿರ ಉದ್ಘಾಟನೆ ಹಾಗೂ ಹಾವೇರಿ ಬಾಲಕೀಯರ ಪ್ರಥಮ ದರ್ಜೆ ಮಹಾವಿದ್ಯಾಲಯ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ, ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ಕಾಮಗಾರಿಗಳ ಶೀಲಾನ್ಯಾಸ ಜರುಗಲಿದೆ ಎಂದು ತಿಳಿಸಿದರು.
ಎಂ.ಐ.ಆರ್.ಯ೦ತ್ರ: ಒಂದು ತಿಂಗಳೊಳಗಾಗಿ ಜಿಲ್ಲೆಗೆ ಎಂ.ಐ.ಆರ್.ಯAತ್ರ ಬರಲಿದ್ದು, ಇನ್ನುಮುಂದೆ ರೋಗಿಗಳು ಎಂ.ಐ.ಆರ್ ಸ್ಕಾö್ಯನ್‌ಗೆ ಹುಬ್ಬಳ್ಳಿ ಹಾಗೂ ದಾವಣಗೆರೆ ಹೋಗುವುದು ತಪ್ಪಲಿದೆ. ಈ ಯಂತ್ರವನ್ನು ವೈದ್ಯಕೀಯ ಕಾಲೇಜಿನಲ್ಲಿ ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ಅಳವಡಿಸುವ ಕುರಿತು ಚಿಂತನೆ ಮಾಡಲಾಗುತ್ತಿದೆ. ಬರುವ ದಿನಗಳಲ್ಲಿ ವೈದ್ಯಕೀಯ ಸೀಟುಗಳು, ನರ್ಸಿಂಗ್ ಸೀಟುಗಳು ಹೆಚ್ಚಾಗಲಿದ್ದು, ಇದರಿಂದ ಜಿಲ್ಲೆಯಲ್ಲಿ ವೈದ್ಯರ ಹಾಗೂ ನರ್ಸಿಂಗ್ ಸಿಬ್ಬಂದಿಗಳ ಕೊರತೆ ಆಗುವುದಿಲ್ಲ ಎಂದರು.
ಜಿಲ್ಲೆಯ ಜನತೆಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸಲಾಗುತ್ತಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ೩೩೦ ಹಾಸಿಗೆಗಳಿಂದ ೫೦೦ ಹಾಸಿಗೆಗೆ ಉನ್ನತೀಕರಿಸಲಾಗಿದೆ. ಆಸ್ಪತ್ರೆ ಉನ್ನತೀಕರಣ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ರೂ.೨೦ ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.
೧೭ ಪಿಜಿ ಸೀಟುಗಳು: ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಡೀನ್ ಮತ್ತು ನಿರ್ದೇಶಕ ಪ್ರದೀಪಕುಮಾರ ಎಂ.ವೈ ಅವರು ಮಾತನಾಡಿ, ವೈದ್ಯಕೀಯ ಕಾಲೇಜಿನಲ್ಲಿ ವಾರ್ಷಿಕ ೧೫೦ ರಂತೆ ೬೦೦ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ತೃತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಶೇ.೧೦೦ ರಷ್ಟಾಗಿದೆ. ಪ್ರಸಕ್ತ ೨೦೨೫-೨೬ನೇ ಸಾಲಿಗೆ ೧೭ ಪಿಜಿ ಸೀಟುಗಳು ಮಂಜೂರಾಗಿದ್ದು, ಸೀಟು ಹಂಚಿಕೆ ಪ್ರಗತಿಯಲ್ಲಿದೆ. ನಸಿಂಗ್ ಕಾಲೇಜನ್ನು ಈ ಸಂಸ್ಥೆಗ ಜೋಡಣೆ ಮಾಡಲಾಗಿದ್ದು, ೪೦ ಬಿಎಸ್ಸಿ ನರ್ಸಿಂಗ್ ಹಾಗೂ ೪೦ ಜಿ.ಎನ್.ಎಂ.ನರ್ಸಿAಗ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ಯಾರಾಮೆಡಿಕಲ್ ಮಂಡಳಿಯಡಿ ೧೦೦ ಪ್ಯಾರಾಮೆಡಿಲ್ ಪ್ರವೇಶಾತಿ ಸೌಲಭ್ಯವಿದೆ . ಬರುವ ದಿನಗಳಲ್ಲಿ ಎಂ.ಬಿ.ಬಿ.ಎಸ್. ಸೀಟುಗಳನ್ನು ೨೦೦ಕ್ಕೆ ನರ್ಸಿಂಗ್ ಸೀಟಗಳನ್ನು ೮೦ಕ್ಕೆ ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ
ಎಂದು ತಿಳಿಸಿದರು.
ಅಲೈಡ್ ಹೆಲ್ತ್ ಸೈನ್ಸ್ಸನ ನಾಲ್ಕು ಕೋರ್ಸುಗಳ ೭೦ ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಮತಿ ದೊರೆತಿದೆ. ಈ ವಿಜ್ಞಾನ ಸಂಸ್ಥೆಯಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯ(ಸ್ಕೀಲ್ ಲ್ಯಾಬ್) ಆರಂಭಿಸಲಾಗಿದೆ. ಪ್ರಿ-ಪ್ಯಾರಾ ಕ್ಲಿನಿಕಲ್ ವಿಭಾಗಗಳ ವಸ್ತು ಸಂಗ್ರಹಾಲಯಗಳು ಬೇರೆ ಕಾಲೇಜುಗಳಿಂದ ಭಿನ್ನವಾಗಿದ್ದು, ಎರಡು ತಿಂಗಳಲ್ಲಿ ಪೂರ್ಣಗೊಳ್ಳಲಿವೆ. ಸಂಸ್ಥೆಯ ಆವರಣದಲ್ಲಿ ೫೦ ಹಾಸಿಗೆಗಳ ಕ್ರಿಟಿಕಲ್ ಕೇರ್ ಬ್ಲಾಕ್(ಸಿಸಿಬಿ) ಆಸ್ಪತ್ರೆ ನಿರ್ಮಾಣವಾಗುತ್ತಿದೆ. ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲೇ ಪ್ರಥಮವಾಗಿ ಕನ್ನಡ ಭಾಷೆಯ ಅತ್ಯುತ್ತಮ ಪುಸ್ತಕಗಳ ಗ್ರಂಥಾಲಯ ಆರಂಭಿಸಲಾಗಿದೆ. ಜಿಲ್ಲಾ ಆಸ್ಪತ್ರೆ ವೈದ್ಯಕೀಯ ಕಾಲೇಜಿನೊಂದಿಗೆ ಸಂಯೋಜನೆಗೊ೦ಡ ನಂತರ ರೋಗಿಗಳಿಗೆ ಉತ್ತಮ, ಆರೋಗ್ಯ ಸೇವೆ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಪಿ.ಆರ್.ಹಾವನೂರ ಅವರು ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ೨೦೨೩ನೇ ಸಾಲಿನಲ್ಲಿ ೩,೦೪,೮೮೩ ಹೊರರೋಗಿಗಳು ಹಾಗೂ ೩೪,೮೧೪ ಒಳರೋಗಿಗಳು, ೨೦೨೪ನೇ ಸಾಲಿನಲ್ಲಿ ೩,೪೫,೫೭೬ ಹೊರರೋಗಿಗಳು ಹಾಗೂ ೪೧,೩೯೪ ಒಳರೋಗಿಗಳು, ೨೦೨೫ನೇ ಸಾಲಿನಲ್ಲಿ ೩,೮೪,೯೬೫ ಹೊರರೋಗಿಗಳು ಹಾಗೂ ೩೯,೩೪೯ ಒಳರೋಗಿಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿ ಗೋಷ್ಟಿಯಲ್ಲಿ ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ, ಸಂಜೀವಕುಮಾರ ನೀರಲಗಿ ಇತರರು ಉಪಸ್ಥಿತರಿದ್ದರು.
.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.