ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದು ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ ಅವರು, ಕನಕಪುರ , ದೊಡ್ಡ ಆಳಹಳ್ಳಿ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ನನ್ನ ಮೇಲೆ ಇರುವ ಪ್ರಕರಣಗಳನ್ನು ಸಭಾಪತಿ ತನಿಖೆಗೆ ಕೊಟ್ಟಿದ್ದಾರೆ.
ನಾನು ತನಿಖೆಗೆ ಸಹಕರಿಸುತ್ತೇನೆ ಸಮಯ ಕೊಡಿ ಎಂದಿದ್ದೇನೆ. ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. “ಕೇಂದ್ರ ನಮ್ಮನ್ನು ಬಹಳ ಪ್ರೀತಿ ಮಾಡುತ್ತಿದೆ, ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೇಡ್ ಮಾಡ್ತಾರೆ” ಎಂದು ಸಿಬಿಐ ದಾಳಿ ಕುರಿತು ಡಿಕೆಶಿವಕುಮಾರ ವ್ಯಂಗ್ಯವಾಡಿದ್ದಾರೆ.
ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.