This is the title of the web page

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿದ್ದ ಡಾ. ಚನ್ನವೀರ ಕಣವಿ

ಧಾರವಾಡ, 16- ಇಂದು ಧಾರವಾಡದಲ್ಲಿ ನಿಧನರಾದ 93 ವರ್ಷ ವಯಸ್ಸಿನ ಚನ್ನವೀರ ಕಣವಿ ಅವರು ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

“ಸಾಮಾಜಿಕ ಸಾಮರಸ್ಯದ ದೃಷ್ಟಿಯಿಂದ ಇದನ್ನು ಕೈಬಿಡಬೇಕು” ಎಂದು ಅವರು ಆಗ್ರಹಿಸಿದ್ದರು.
“ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ಸಾಮಾಜಿಕ ಸಾಮರಸ್ಯದ ದೃಷ್ಟಿಯಿಂದ ಕೈ ಬಿಡಬೇಕು. ಇದನ್ನು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಡೆದಿರುವ ದೌರ್ಜನ್ಯದ ಕುರಿತ ಸಾರ್ವಜನಿಕ ದೂರುಗಳನ್ನು ವಿಚಾರಣೆ ನಡೆಸಬೇಕು” ಎಂದು ಚನ್ನವೀರ ಕಣವಿ ಒತ್ತಾಯಿಸಿದ್ದರು.

“ದೇಶದಲ್ಲಿ ಸಮೃದ್ಧಿ ತರಲು ಸಾಮಾಜಿಕ ಸೌಹಾರ್ದತೆ ಅತ್ಯಗತ್ಯವಾಗಿದೆ. ಅಶಾಂತಿ, ಕೋಮು ಬಿಕ್ಕಟ್ಟು, ಕ್ಷೋಭೆ, ಭವಿಷ್ಯದ ಬಗ್ಗೆ ಚಿಂತೆ ಇತ್ಯಾದಿಗಳನ್ನು ಉತ್ಪಾದಿಸುವ ಕಾನೂನುಗಳನ್ನು ಪ್ರಗತಿ ವಿರೋಧಿ ಹಾಗೂ ಜನ ವಿರೋಧಿ ಎಂದೇ ಭಾವಿಸಬಹುದು” ಎಂದು ಕಣವಿ ಅವರು ಪೌರತ್ವ ಕಾಯ್ದೆ ತರುವಾಗ ನಡೆದ ಪ್ರತಿಭಟನೆಗಳ ಸಮಯದಲ್ಲಿ ಹೇಳಿದ್ದರು.

“ಎಲ್ಲಾ ಜಾತಿ, ಮತ, ಪಂಥಗಳನ್ನೂ ಮೀರಿದ ಸಂತರಿಂದ ಅನುಭಾವಿಗಳಿಂದ ಕೂಡಿದ ನಮ್ಮ ಆಧ್ಮಾತ್ಮಿಕ ಜಗತ್ತು ಇದೆ. ಅದೇ ರೀತಿ ಸಾಹಿತ್ಯ, ಸಂಗೀತ, ಕಲಾ ಪ್ರಪಂಚ ಸಂಪದ್ಭರಿತವಾಗಿದೆ. ಜಾತಿ, ಮತಗಳ ಭಾವನೆಯ ಬೀಜ ಬಿತ್ತುವುದು ನಮ್ಮ ಪರಂಪರೆಗೆ ಬಗೆಯುವ ದ್ರೋಹ” ಎಂದು ಕಣವಿ ವ್ಯಾಖ್ಯಾನಿಸಿದ್ದರು.

“ಸದ್ಯ ದೇಶದಲ್ಲಿ ಅಶಾಂತಿ, ಹಾಹಾಕಾರ ಉಂಟು ಮಾಡಿದ ಪೌರತ್ವ ಸಂಬಂಧಿತ ಎಲ್ಲಾ ಕಾನೂನು, ಕಾರ್ಯಕ್ರಮಗಳನ್ನು ಕೈ ಬಿಟ್ಟು ಸರ್ಕಾರ ಮತ್ತು ರಾಜಕೀಯ ಧುರೀಣರು ಸಾಮಾಜಿಕ ಸಾಮರಸ್ಯ ಸ್ಥಾಪಿಸಲು ಶ್ರಮಿಸಬೇಕು” ಎಂದು ಚನ್ನವೀರ ಕಣವಿ ಕರೆ ನೀಡಿದ್ದರು.

You might also like
Leave a comment