This is the title of the web page

ರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ದ್ರೌಪದಿ ಮುರ್ಮು 

ಹೊಸದಿಲ್ಲಿ: ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಿನ್ನೆ  ಈ ಬಗ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ ಶಾ ಅವರನ್ನು ಭೇಟಿಯಾಗಿದ್ದರು.

64 ವರ್ಷದ ಮುರ್ಮು ಅವರನ್ನು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ ಮುಂಡಾ ಮತ್ತು ಹಲವಾರು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.

ಅವರು ಜಾರ್ಖಂಡ್ ನ ಮೊದಲ ಮಹಿಳಾ ರಾಜ್ಯಪಾಲೆಯಾಗಿದ್ದಾರೆ. ಅವರು 2015 ರಿಂದ 2021 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.

You might also like
Leave a comment