This is the title of the web page

ಆರೋಗ್ಯ ಇಲಾಖೆ ಯಡವಟ್ಟು : ಚಾಲಕನನ್ನು ಸಹ ನಿರ್ದೇಶಕರ ಹುದ್ದೆಗೆ ವರ್ಗಾವಣೆ 

 

ಬೆಂಗಳೂರು, ೧೮- ಆರೋಗ್ಯ ಇಲಾಖೆಯ ಚಾಲಕರೊಬ್ಬರನ್ನು ಸಹ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಇತ್ತೀಚೆಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರ್ಗಾವಣೆ ಪಟ್ಟಿಯಲ್ಲಿ, ಚಾಲಕರೊಬ್ಬರನ್ನು, ಸಹ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕಲಬುರ್ಗಿ ಜಿಲ್ಲೆಯ ಕೊಲ್ಲೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲಕರಾಗಿದ್ದ ಶಾಂತವೀರಪ್ಪ ಅವರನ್ನು ವರ್ಗಾವಣೆಗೊಳಿಸಿದೆ. ಚಾಲಕರಾಗಿದ್ದ ಅವರನ್ನು ಕಲಬುರ್ಗಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಖಾಲಿ ಇದ್ದಂಥ ವಿಭಾಗೀಯ ಸಹ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿರುವುದಾಗಿ ಆದೇಶಿಸಿದೆ.

ಆರೋಗ್ಯ ಇಲಾಖೆಯಲ್ಲಿ ಚಾಲಕರನ್ನು ಯಾವ ಆಧಾರದ ಮೇಲೆ ಸಹ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿದೆ ಎಂಬುದೇ ಈಗ ಯಕ್ಷ ಪ್ರಶ್ನೆಯಾಗಿದೆ.

You might also like
Leave a comment