ವಿಜಯಪುರ : ಜಿಲ್ಲೆಯ ಹಲವಡೆ ಮತ್ತೆ ತಡರಾತ್ರಿ ಭೂಕಂಪನದ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣ, ಸುತ್ತಮುತ್ತ ತಡರಾತ್ರಿ 3 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ಹಲವು ಭಾರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕದಿಂದ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಆಗಾಗ ಭೂಕಂಪನವಾಗುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.