This is the title of the web page

ಬೆಳಗಿನ ಜಾವ ಕರ್ನಾಟಕದಲ್ಲಿ ನಡುಗಿತು ಭೂಮಿ : ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ 

 

 

ಕೊಡಗು / ಹಾಸನ: ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಬೆಳಗಿನ ಜಾವ ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.4 ರಷ್ಟು ದಾಖಲಾಗಿದೆ.

ಜಿಲ್ಲೆಯ ಹೊಳೆನರಸೀಪುರ, ಅರಕಲಗೂಡು ತಾಲೂಕಿನಲ್ಲಿ ಲಘು ಭೂಕಂಪನ ಅನುಭವವಾಗಿದೆ. ಅರಕಲಗೂಡು ತಾಲೂಕಿನ ಮುದ್ದನಹಳ್ಳಿ, ಹನೆಮಾರನಹಳ್ಳಿ, ಕಾರಹಳ್ಳಿ, ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ.

ಅದರಂತೆ ಹಾಸನ ತಾಲೂಕಿನ ಮಲ್ಲೆದೇವರಪುರ, ಕಾರ್ಲೆ ಅಂಕನಹಳ್ಳಿ ಗ್ರಾಮಗಳಲ್ಲೂ ಭೂಮಿ ಕಂಪಿಸಿದೆ. ಹೊಳೆನರಸೀಪುರ ಪಟ್ಟಣದ ಹಳ್ಳಿ ಮೈಸೂರು ಗ್ರಾಮದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.

ಬೆಳಗಿನ ಜಾವ 4.38 ಗಂಟೆಗೆ ಈ ಭೂಕಂಪವಾಗಿದೆ. ನಿದ್ದೆಯಲ್ಲಿದ್ದ ಜನರು ಮನೆಯಿಂದ ಹೊರಗೆ ಓಡಿ ಬಂದು ಆತಂಕ ವ್ಯಕ್ತಪಡಿಸಿದರು.ಈ ಬಗ್ಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧಿಕಾರಿಗಳು ಲಘು ಭೂಕಂಪನವನ್ನು ದೃಢಪಡಿಸಿದ್ದಾರೆ.

 

You might also like
Leave a comment