Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಸರ್ಕಾರಿ ಶಾಲೆಗಳಲ್ಲಿ ಪ್ರತಿತಿಂಗಳು 100 ರೂ. ದೇಣಿಗೆ ಸಂಗ್ರಹ ಆದೇಶ ಹಿಂಪಡೆದ ಶಿಕ್ಷಣ ಇಲಾಖೆ


ಬೆಂಗಳೂರು: ಎಸ್ ಡಿ ಎಂ ಸಿಗೆ ಶಾಲೆಗಳ ಅಭಿವೃದ್ಧಿಗಾಗಿ ಪ್ರತಿ ತಿಂಗಳು ವಿದ್ಯಾರ್ಥಿಗಳಿಂದ 100 ರೂ. ದೇಣಿಗೆ ಸಂಗ್ರಹಕ್ಕೆ ಅನುಮತಿ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಈ ಆದೇಶ ಭಾರಿ ವಿವಾದ ಹಾಗೂ ಆಕ್ರೋಶಕ್ಕೆ ಕಾರಣವಾಗಿತ್ತು.

ಅಲ್ಲದೇ ರಾಜ್ಯ ಸರ್ಕಾರದ ದಿವಾಳಿ ತನವನ್ನು ಎತ್ತಿ ತೋರಿಸುತ್ತಿದೆ ಎಂಬುದಾಗಿ ವಿರೋಧ ಪಕ್ಷಗಳ ನಾಯಕರು, ಸಾರ್ವಜನಿಕರು ಗುಡುಗಿದ್ದರು. ಈ ಬೆನ್ನಲ್ಲೇ ಶಿಕ್ಷಣ ಇಲಾಖೆಯಿಂದ 100 ರೂ. ದೇಣಿಗೆ ಸಂಗ್ರಹದ ಆದೇಶವನ್ನು ಹಿಂಪಡೆಯಲಾಗಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ಶಿಕ್ಷಣ ಸಚಿವರ ಸೂಚನೆಯ ಮೇರೆಗೆ, 100 ರೂ. ದೇಣಿಗೆ ಸಂಗ್ರಹದ ಸುತ್ತೋಲೆಯನ್ನು ಹಿಂಪಡೆಯಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಆದೇಶ ಹೊರಡಿಸುವ ಮುನ್ನ ಪ್ರತಿಕ್ರಿಯಿಸಿದ ಸಚಿವ ಬಿ.ಸಿ.ನಾಗೇಶ್ ಕೆಲವೊಂದು ಸುತ್ತೋಲೆಗಳು ಸರ್ಕಾರದ ಗಮನಕ್ಕೆ ಬರುವುದಿಲ್ಲ. 100 ರೂ ಸಂಗ್ರಹ ಸಂಬಂಧ ಹೊರಡಿಸಿರುವ ಸುತ್ತೋಲೆ ಶಿಕ್ಷಣ ಇಲಾಖೆಯಿಂದ ಹೊರಡಿಸಿರುವುದಾಗಿದೆ. ಇದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ ಸ್ಪಷ್ಟ ಪಡಿಸಿದ್ದಾರೆ.


A B Dharwadkar
the authorA B Dharwadkar

Leave a Reply