Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ವಿಜಯಪುರ ಮಹಾನಗರಪಾಲಿಕೆ ಚುನಾವಣೆ : ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ 

vijaypur

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಿರುವ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಹಾನಗರ ಪಾಲಿಕೆಯ 35 ವಾರ್ಡಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಿಸಿದ್ದು, ಅಕ್ಟೋಬರ 28 ರಂದು‌ ಮತದಾನ ನಡೆಯಲಿದೆ.

ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಶಾಲಾ ಕಾಲೇಜು, ಸರ್ಕಾರಿ ಕಚೇರಿ, ಸರ್ಕಾರಿ ಸಂಸ್ಥೆಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮತಗಟ್ಟೆ ಸ್ಥಾಪಿಸಿರುವ ಶಾಲಾ ಕಾಲೇಜು, ಸರ್ಕಾರಿ ಕಚೇರಿ, ಸರ್ಕಾರಿ ಸಂಸ್ಥೆಗಳಿಗೆ ಅಕ್ಟೋಬರ 28ರಂದು ರಜೆ ಘೋಷಿಸಲಾಗಿದೆ.

ಜಿಲ್ಲಾ‌ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಈ ರಜೆ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.


A B Dharwadkar
the authorA B Dharwadkar

Leave a Reply