ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ವಿದ್ಯುತ್ ದರಗಳನ್ನು ಹೆಚ್ಚಿಸಿದ್ದರಿಂದ ಇಂದಿನಿಂದ ನೂತನ ದರಗಳು ಜಾರಿಗೆ ಬರಲಿದ್ದು ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಮತ್ತೆ ಬರೆ ಎಳೆಯಲಾಗುತ್ತಿದೆ.
ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಲಿಮಿಟೆಡ್, ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ , ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್, ಈ ವಿಭಾಗಗಳ ವಿದ್ಯುತ್ ಬೆಲೆ ಹೆಚ್ಚಳಕ್ಕೆ ಆಯೋಗ ಆದೇಶ ನೀಡಿದೆ.ಅಕ್ಟೋಬರ್ 2022 ರಿಂದ ಮಾರ್ಚ್ 2023 ರವರೆಗೆ ನೂತನ ನಿಯಮ ಜಾರಿಯಲ್ಲಿದೆ ಅಂತ ಆದೇಶದಲ್ಲಿ ತಿಳಿಸಲಾಗಿದೆ.
ಈ ಪೈಕಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ 35 ಪೈಸೆ ದರ ಹೆಚ್ಚಳ ಮಾಡಿದೆ.