Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ವರ್ಷಕ್ಕೊಮ್ಮೆ ವಿದ್ಯುತ್ ದರ ಏರಿಕೆ : ಇಂಧನ ಸಚಿವ

sunilkumar

ಉಡುಪಿ: ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಸುವ ಬದಲಾಗಿ, ವರ್ಷಕ್ಕೊಮ್ಮೆ ವಿದ್ಯುತ್ ದರವನ್ನು ಹೆಚ್ಚಿಸುವ ಪ್ರಸ್ತಾವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಂದಿಟ್ಟಿರುವುದಾಗಿ ಇಂಧನ ಸಚಿವ ವಿ.ಸುನೀಲ ಕುಮಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಗ್ರಾಹಕರಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಸುವುದರಿಂದ ಹೊರೆ ಆಗಲಿದೆ. ಹೀಗಾಗಿ ವರ್ಷಕ್ಕೊಮ್ಮೆ ಹೆಚ್ಚಿಸುವುದು ಸೂಕ್ತ ಎಂಬ ಚಿಂತನೆ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಉತ್ತಮ ಮಳೆ ಹಾಗೂ ಕಲ್ಲಿದ್ದಲು ಶೇಖರಣೆಯಿಂದಾಗಿ ವಿದ್ಯುತ್ ಕೊರತೆ ಉಂಟಾಗುವುದಿಲ್ಲ. ದೀಪಾವಳಿ ಹಬ್ಬಕ್ಕೂ ಲೋಡ್ ಶೆಡ್ಡಿಂಗ್ ಆಗುವುದಿಲ್ಲ. ಬೇಸಿಗೆಯಲ್ಲೂ ವಿದ್ಯುತ್ ಸಮಸ್ಯೆ ತಲೆದೋರದಂತೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.


A B Dharwadkar
the authorA B Dharwadkar

Leave a Reply