This is the title of the web page

ಪಿಯುಸಿಯಲ್ಲಿ ಫೇಲ್ : ವಿದ್ಯಾರ್ಥಿ ಆತ್ಮಹತ್ಯೆ 

ಕಾರವಾರ, ೧೮-: ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ಹಿನ್ನೆಲೆಯಲ್ಲಿ ಇದರಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಮಟಾ ತಾಲೂಕಿನ‌ ಕಡ್ಲೆ ಗ್ರಾಮದಲ್ಲಿ ನಡೆದಿದೆ.

ಪ್ರಣಮ ಈಶ್ವರ ನಾಯ್ಕ(18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಎ.ವಿ. ಬಾಳಿಗಾ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರಣಮ, 4 ವಿಷಯಗಳಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಕುಮಟಾ‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You might also like
Leave a comment