Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

Crime News

ನಕಲಿ ಬಂಗಾರ ಮಾರಾಟ ಮಾಡುತ್ತಿದ್ದವರ ಬಂಧನ 


ವಿಜಯನಗರ: ನಕಲಿ ಬಂಗಾರದ ನಾಣ್ಯಗಳನ್ನು ಅಸಲಿ ಚಿನ್ನದ ನಾಣ್ಯಗಳೆಂದು ನಂಬಿಸಿ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಖದೀಮರನ್ನು ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಬಸ್‌ ನಿಲ್ದಾಣದಲ್ಲಿ ಸೆರೆ ಹಿಡಿದಿದ್ದಾರೆ.

ಕೂಡ್ಲಿಗಿಯ ನಾಗರಾಜ (53), ಕಿರಣ (20) ಬಂಧಿತ ಆರೋಪಿಗಳು, ತಿಮ್ಮಣ್ಣ ಎಂಬ ಆರೋಪಿ ಪರಾರಿಯಾಗಿದ್ದು, ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬಸ್‌ ನಿಲ್ದಾಣದಲ್ಲಿ ನಕಲಿ ಚಿನ್ನದ ನಾಣ್ಯ ಮಾರಾಟ ಮಾಡಲು ಯತ್ನಿಸುತ್ತಿರುವುದನ್ನು ಗಮನಿಸಿದ ಪೊಲೀಸರು, ಆರೋಪಿಗಳ ಬಂಧನಕ್ಕೆ ಮುಂದಾದಾಗ ಒಬ್ಬ ಪರಾರಿಯಾಗಿದ್ದಾನೆ.

ಬಂಧಿತರಿಂದ 2,606 ಗ್ರಾಂ ತೂಕದ ನಕಲಿ ಬಂಗಾರದ ನಾಣ್ಯಗಳು, 2,000 ರೂ. ನಗದು ಜಪ್ತಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


A B Dharwadkar
the authorA B Dharwadkar

Leave a Reply