This is the title of the web page

ಹೂಡಿಕೆದಾರರನ್ನು ತಮ್ಮತ್ತ ಆಕರ್ಷಿಸಲು ಕರ್ನಾಟಕದ ಮೇಲೆ ಸುಳ್ಳು ಆರೋಪ

ಬೆಂಗಳೂರು, ೯- ಕರ್ನಾಟಕದಲ್ಲಿ ಕೋಮು ವಿಚಾರಗಳಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ ಎಂದು ಹೇಳಿ ಹೂಡಿಕೆದಾರರನ್ನು ತಮ್ಮತ್ತ ಆಕರ್ಷಿಸಲು ನೆರೆಯ ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳು ಪ್ರಯತ್ನಿಸುತ್ತಿವೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ತೆಲಂಗಾಣ ಐಟಿ ಸಚಿವ ಕೆಟಿ ರಾಮರಾವ ಮತ್ತು ತಮಿಳುನಾಡು ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ ಅವರು ಕರ್ನಾಟಕದಲ್ಲಿ ಕೋಮು ವಿವಾದಗಳಿವೆ ಎಂದು ಹೇಳಿ ತಮ್ಮ ರಾಜ್ಯದತ್ತ ಹೂಡಿಕೆದಾರರನ್ನು ಆಕರ್ಷಿಸಲು ಯತ್ನಿಸಿದ್ದಾರೆಂಬ ವರದಿಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕರ್ನಾಟಕ ಮತ್ತು ಈ ರಾಜ್ಯಗಳ ನಡುವೆ ಯಾವುದೇ ಹೋಲಿಕೆ ಇಲ್ಲ, ಏಕೆಂದರೆ ವಿಶ್ವದಾದ್ಯಂತ ಹೂಡಿಕೆದಾರರನ್ನು ಕರ್ನಾಟಕ ರಾಜ್ಯವು ಆಕರ್ಷಿಸುತ್ತಿದೆ ಎಂದು ಹೇಳಿದ್ದಾರೆ.

ತಮ್ಮತ್ತ ಹೂಡಿಕೆದಾರರನ್ನು ಆಕರ್ಷಿಸಲು ಇತರೆ ರಾಜ್ಯಗಳ ಮೇಲೆ ಆಪಾದನೆ ಮಾಡುವುದು ಅವರು ಎಂಥ ಗುಣದವರು ಎಂಬುದನ್ನು ತೋರಿಸುತ್ತದೆ ಎಂದು ಹೇಳಿರುವ ಬೊಮ್ಮಾಯಿ, ಕಳೆದ ಮೂರು ತ್ರೈಮಾಸಿಕಗಳಲ್ಲಿ ರಾಜ್ಯವು ದೇಶಕ್ಕೆ ಗರಿಷ್ಠ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿದೆ ಎಂದಿದ್ದಾರೆ.

You might also like
Leave a comment