This is the title of the web page

ಖ್ಯಾತ ಉದ್ಯಮಿ ರಾಹುಲ್ ಬಜಾಜ್ ನಿಧನ

ಪುಣೆ, 12- ಖ್ಯಾತ ಉದ್ಯಮಿ ಮತ್ತು ಬಜಾಜ್ ಸಮೂಹಗಳ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ರಾಹುಲ್ ಬಜಾಜ್ ಅವರು ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರೂಬಿ ಹಾಲ್ ಕ್ಲಿನಿಕ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪುರವೇಜ ಗ್ರಾಂಟ್ ಹೇಳಿದ್ದಾರೆ.

ರಾಹುಲ್ ಬಜಾಜ್ ಅಬರ ಪಾರ್ಥೀವ ಶರೀರವನ್ನು ರೂಬಿ ಹಾಲ್‌ನಿಂದ ಶೀಘ್ರ ನಿವಾಸಕ್ಕೆ ಕೊಂಡೊಯ್ಯಲಾಗುವುದು ಮತ್ತು ಫೆ.13ರಂದು ಬೆಳಗ್ಗೆ 11 ಗಂಟೆಯಿಂದ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಸಂಜೆ 4 ಗಂಟೆಗೆ ಪುಣೆಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ರಾಹುಲ್ ಬಜಾಜ್ ಅವರು 1938ರ ಜೂನ್ 10ರಂದು ಜನಿಸಿದರು. ರಾಹುಲ್ ಬಜಾಜ್ ಅವರು ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಾಮಾಜಿಕ ಕಾರ್ಯಕರ್ತ ಜಮ್ನಾಲಾಲ್ ಬಜಾಜ್ ಅವರ ಮೊಮ್ಮಗ.

ದೆಹಲಿ ವಿಶ್ವವಿದ್ಯಾಲಯದ ಸೇಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಓದಿದ ಅವರು ಬಜಾಜ್ ಎಲೆಕ್ಟ್ರಿಕಲ್ಸ್ ಕಂಪನಿಯಲ್ಲಿ ಮೂರು ವರ್ಷಗಳ ಕಾಲ ತರಬೇತಿ ಪಡೆದಿದ್ದರು. ಮುಂಬೈ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನವನ್ನೂ ಮಾಡಿದ್ದರು. ನಂತರ 1960ರಲ್ಲಿ ಹಾವರ್ಡ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಪಡೆದರು.

ರಾಹುಲ್ ಬಜಾಜ್ ಅವರು 40 ವರ್ಷಗಳ ಕಾಲ ಬಜಾಜ್ ಗ್ರೂಪ್‌ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ಪ್ರಸ್ತುತ ಸಂಸ್ಥೆಯ ಎಮೆರಿಟಸ್ ಅಧ್ಯಕ್ಷರಾಗಿದ್ದರು.

You might also like
Leave a comment