ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಬೇಡ ಎಂದಿದ್ದಕ್ಕೆ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋನಿಯಾ ಗಾಂಧಿ ನಗರದ ನಿಜಾಮುದ್ದಿನ ಪ್ಲಾಟ್ನಲ್ಲಿ ನಡೆದಿದೆ.
ಕಾಂಗ್ರೆಸ್ ಯುವ ಮುಖಂಡ ತೌಸಿಫ ಲಕ್ಕುಂಡಿ ಹಲ್ಲೆಗೊಳಗಾದ ವ್ಯಕ್ತಿ. ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ನಗರದಲ್ಲಿ ಮನೆ ಮಾಡಿದ್ದ ತೌಸಿಫ ಮನೆಯ ಬಳಿ ಪದೇ ಪದೇ ಐದಾರು ಜನರೊಂದಿಗೆ ಬಂದು ನಿಲ್ಲುತ್ತಿದ್ದ ಇಸ್ಮಾಯಿಲ್ ಎಂಬುವರ ನಡುವೆ ವಾಗ್ವಾದ ನಡೆದಿತ್ತು ಎಂದು ಆರೋಪಿಸಲಾಗಿದೆ. ಇದನ್ನೇ ಹಗೆ ಸಾಧಿಸಿದ ಇಸ್ಮಾಯಿಲ್ ನಿನ್ನೆ ರಾತ್ರಿ ತೌಸಿಫ್ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಘಟನೆಯಲ್ಲಿ ಗಾಯಗೊಂಡ ತೌಸಿಫ್ ಅವರನ್ನು ಚಿಕಿತ್ಸೆಗಾಗಿ ಕಿಮ್ಸಗೆ ದಾಖಲಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಹಳೆ ಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.