This is the title of the web page

ತೀವ್ರ ವಿರೋಧ ನಡುವೆ ಇದೇ 24 ರಿಂದ ಅಗ್ನಿಪಥ ಯೋಜನೆಯಡಿ ನೇಮಕಾತಿ ಆರಂಭ

ಹೊಸದಿಲ್ಲಿ, ೧೮- : ಅಗ್ನಿಪಥ ಯೋಜನೆಗೆ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಬಿಹಾರ, ಉತ್ತರಪ್ರದೇಶ, ತೆಲಂಗಾಣದಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ.

ಪ್ರತಿಭಟನಾಕಾರರು ಸಾರ್ವಜನಿಕ ಸ್ವತ್ತುಗಳನ್ನು ಗುರಿಯಾಗಿಸಿಕೊಂಡಿದ್ದು, ರೈಲು, ವಾಹನ, ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲಾಗಿದೆ. ಪ್ರತಿಭಟನೆಯ ಪರಿಣಾಮ ಏಳು ರೈಲುಗಳು ಅಗ್ನಿಗಾಹುತಿಯಾಗಿವೆ.

ಇತ್ತ ಕೇಂದ್ರ ಸರ್ಕಾರ ತೀವ್ರ ಪ್ರತಿಭಟನೆಯ ನಡುವೆಯೂ ಅಗ್ನಿಪಥ ಯೋಜನೆಯಡಿ ನೇಮಕಾತಿಗೆ ವಾಯುಪಡೆ ಮುಂದಾಗಿದೆ. ಜೂನ್ 24ರಿಂದ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ವಾಯುಪಡೆ ಮುಖ್ಯಸ್ಥ ವಿ.ಆರ್. ಚೌಧರಿ ತಿಳಿಸಿದ್ದಾರೆ.

ಅಲ್ಲದೇ ಗರಿಷ್ಠ ವಯೋಮಿತಿಯನ್ನು ಈಗ 21 ವರ್ಷದಿಂದ 23 ವರ್ಷಗಳಿಗೆ ಹೆಚ್ಚಳ ಮಾಡಲಾಗಿದ್ದು ಹೆಚ್ಚಿನ ಯುವಕರಿಗೆ ಅವಕಾಶ ಸಿಗಲಿದೆ ಎಂದು ಅವರು ಹೇಳಿದ್ದಾರೆ.

You might also like
Leave a comment