Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

೩ ದಿನಗಳಲ್ಲಿ ಖಾಸಗಿ ಬಸ್ ಗಳಿಂದ 1.90 ಲಕ್ಷ ರೂ. ದಂಡ ವಸೂಲಿ 


ಬೆಂಗಳೂರು : ಹಬ್ಬದ ರಜೆಗಳು ಇರುವ ಹಿನ್ನೆಲೆ ಸಾಕಷ್ಟು ಜನರು ತಮ್ಮ ಊರಿನತ್ತ ಹೋಗುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ಸುಗಳು ಟಿಕೆಟ್ ದರವನ್ನು ನಾಲ್ಕೈದು ಪಟ್ಟು ಪಡೆಯುತ್ತಿದ್ದಾರೆ.

ಆದರೆ ಪ್ರಯಾಣಿಕರಿಂದ ಹಣ ವಸೂಲಿಗೆ ಇಲಿದ ಖಾಸಗಿ ಬಸ್​ಗಳ ವಿರುದ್ಧ ಆರ್​ಟಿಓ ಅಧಿಕಾರಿಗಳು ಮೂರು ದಿನಗಳಲ್ಲಿ 1.90 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಸಂಜೆ 5 ಗಂಟೆಯಿಂದ ಖಾಸಗಿ ಬಸ್ಸುಗಳ ಪರಿಶೀಲನೆ ಆರಂಭವಾಗಲಿದೆ.

ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ಸುಗಳ ದರ ನಾಲ್ಕೈದು ಪಟ್ಟು ಏರಿಕೆ ಹಿನ್ನಲೆ ಅಂಥ ಟ್ರಾವೆಲ್ಸ್ ಮಾಲೀಕರ ವಿರುದ್ಧ ಆರ್ ಟಿ ಓ ಅಧಿಕಾರಿಗಳು ಪ್ರಕರಣ ದಾಖಲಿಸಿ ದಂಡ ವಿಧಿಸುತ್ತಿದ್ದಾರೆ.

ಅಕ್ಟೋಬರ 20ರಂದು ದುಬಾರಿ ಟಿಕೆಟ್ ದರ ವಸೂಲಿ ಮಾಡುತ್ತಿದ್ದ 198 ಬಸ್​ಗಳನ್ನು ಹಿಡಿದು ಪ್ರಕರಣ ದಾಖಲಿಸಲಾಗಿದೆ. ಎರಡನೇ ದಿನ 143 ವಾಹನಗಳನ್ನು ಹಿಡಿದು ಪ್ರಕರಣ ದಾಖಲಿಸಿದರೆ, ಮೂರನೇ ದಿನದಂದು 109 ಗಾಡಿಗಳನ್ನು ಹಿಡಿದು ಪ್ರಕರಣ ದಾಖಲಿಸಲಾಗಿದೆ.

ಆರ್​ಟಿಓ ಅಧಿಕಾರಿಗಳು ಟ್ರಾವೆಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ಇಟ್ಟು 1.90 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ದುಪ್ಪಟ್ಟು ದಂಡ ವಸೂಲಿ ಮಾಡಿದರೆ ಬಸ್ ಮಾಲೀಕರ ವಿರುದ್ಧ ಕೇಸ್ ದಾಖಲಿಸಿ ದಂಡ ವಸೂಲಿ ಮಾಡಲಿದ್ದಾರೆ.


A B Dharwadkar
the authorA B Dharwadkar

Leave a Reply