ದಾವಣಗೆರೆ: ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಕುಂಕುವಾ ಗ್ರಾಮ ಲೆಕ್ಕಾಧಿಕಾರಿ ಪ್ರಶಾಂತ ಕುಮಾರ ಎಂಬುವವರು ಶಾಸಕ ರೇಣುಕಾಚಾರ್ಯ ವಿರುದ್ಧ ದೂರು ದಾಖಲಿಸಿದ್ದಾರೆ.
ಕೋಗನಹಳ್ಳಿಯಲ್ಲಿ ಹಾನಿಗೊಳಗಾದ ಮನೆಗಳ ಸರ್ವೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರು ಹೇಳಿದಂತೆ ಗ್ರೇಡ್ ಹಾಕಬೇಕು ಎಂದು ತಾಕೀತು ಮಾಡಿದ್ದರು. ಆ ರೀತಿ ವರದಿ ಬದಲಿಸಲು ಆಗಲ್ಲ ಎಂದು ಪ್ರಶಾಂತ ಕುಮಾರ ಹೇಳಿದ್ದರು. ಇದಕ್ಕೆ ಸಾರ್ವಜನಿಕವಾಗಿ ಶಾಸಕರು ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ವಿಎ ಪ್ರಶಾಂತ ಕುಮಾರ ದೂರು ನೀಡಿದ್ದು, ನ್ಯಾಮತಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.