ಘಟಪ್ರಭಾ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಜನರ ವಿರುದ್ಧ ಘಟಪ್ರಭಾ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
ಇದೇ ನವೆಂಬರ್ 11 ಬಿಜೆಪಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಕಾರಿಗೆ ಮುತ್ತಿಗೆ ಹಾಕಿ ಸತೀಶ ಜಾರಕಿಹೊಳಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಹಿನ್ನೆಲೆಯಲ್ಲಿ ಘಟಪ್ರಭಾ ಠಾಣೆಯಲ್ಲಿ ಇದೀಗ 18 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಅಂದು ಸತೀಶ ಜಾರಕಿಹೊಳಿ ಬೆಂಬಲಿಗರು ಧರಣಿ ನಡೆಸುತ್ತಿದ್ದ ವೇಳೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ವಿವಿಧ ದಲಿತ ಸಂಘಟನೆ ಮುಖಂಡರ ವಿರುದ್ಧ ದೂರು ದಾಖಲಾಗಿತ್ತು.