Please assign a menu to the primary menu location under menu

State

ಯಡಿಯೂರಪ್ಪ, ಪುತ್ರ ವಿಜಯೇಂದ್ರ ವಿರುದ್ಧ ಎಫ್‌ಐಆರ್ ದಾಖಲು

bsy and son

ಬೆಂಗಳೂರು : ಬಿಡಿಎ ವಸತಿ ಯೋಜನೆ ಕಾಮಗಾರಿಗೆ ಗುತ್ತಿಗೆ ನೀಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಸಚಿವ ಸೋಮಶೇಖರ, ಶಶಿಧರ್ ಮುರಳಿ, ಸಂಜಯ ಶ್ರೀ, ಚಂದ್ರಕಾಂತ ರಾಮಲಿಂಗಂ ಹಾಗೂ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ರಾಮಲಿಂಗಂ ಕನ್ಸಸ್ಟ್ರಕ್ಷನ್ ಕಂಪನಿಯಿಂದ ಐದು ನಕಲಿ ಕಂಪನಿಗಳ ಮೂಲಕ ಆರೋಪಿತರು ಕೋಟ್ಯಾಂತರ ರೂಪಾಯಿ ಪಡೆದಿದ್ದಾರೆ ಎಂದು ಆರೋಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿ. ಜೆ ಅಬ್ರಾಹಂ ಅರ್ಜಿ ಸಲ್ಲಿಸಿದ್ದರು.


Samadarshi News

Leave a Reply