This is the title of the web page

ಶಿವಮೊಗ್ಗದಲ್ಲಿ ಹಿಂಸಾಚಾರ; ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ, ಲಾಠಿ ಪ್ರಹಾರ

ಶಿವಮೊಗ್ಗ, 21- ಭಜರಂಗದಳ ಕಾರ್ಯಕರ್ತನ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗ ‌ನಗರದಲ್ಲಿ ಹಿಂಸಾಚಾರ ನಡೆದಿದ್ದು ದುಷ್ಕರ್ಮಿಗಳು ಮನೆ ಎದುರು ನಿಲ್ಲಿಸಿದ ವಾಹನಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ.

ಸೀಗೆಹಟ್ಟಿ ಬಡಾವಣೆಯಲ್ಲಿ 3 ಬೈಕ್ ಹಾಗೂ ಒಂದು ಆಟೋಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಭಸ್ಮ ಮಾಡಿದ್ದಾರೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ವಾಹನಗಳಿಗೆ ತಗುಲಿರುವ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ. ವಾಹನಗಳಿಗೆ ಬೆಂಕಿ ಇಡುವುದರ ಜೊತೆಗೆ‌ ಕಲ್ಲು ತೂರಾಟ ನಡೆಸಲಾಗುತ್ತಿದ್ದು, ಪರಿಸ್ಥಿತಿ‌ ನಿಯಂತ್ರಿಸಲು ಲಾಠಿ ಚಾರ್ಜ ಮಾಡಲಾಗುತ್ತಿದೆ ಎಂಬ ವರದಿಗಳು ಬಂದಿವೆ.

ಮನೆಯಿಂದ ಹೊರಬಂದರೆ ಲಾಠಿ ಚಾರ್ಜ್ ಮಾಡುವುದಾಗಿ ಮೈಕ್, ಪೊಲೀಸ್ ವಾಹನಗಳ ಮೂಲಕ ಪೊಲೀಸರು ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ.

You might also like
Leave a comment