ಬೆಳಗಾವಿ : ವಿದೇಶಗಳಲ್ಲಿ ಮತ್ತು ದೇಶದ ಕೆಲ ರಾಜ್ಯಗಳಲ್ಲಿ ಕೊರೋನಾ ಮಹಾಮಾರಿ ಮತ್ತೆ ಹೆಚ್ಚುತ್ತಿದ್ದು ಬೆಳಗಾವಿಯಲ್ಲಿ ಮೊದಲ ಬಲಿ ತೆಗೆದುಕೊಂಡಿದೆ. ಬೆಳಗಾವಿಯ ಬಿಮ್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ವೃದ್ಧರೊಬ್ಬರು ಕೋವಿಡಗೆ ಬಲಿಯಾಗಿದ್ದಾರೆ.
ಬುಧವಾರ ಕೋವಿಡ್ ಪಾಸಿಟಿವ್ ಎಂದು ತಪಾಸಣೆಯಲ್ಲಿ ಕಂಡು ಬಂದಿತ್ತು. ತಡರಾತ್ರಿ ಚಿಕಿತ್ಸೆ ಫಲಿಸದೇ ವೃದ್ಧರು ಮೃತಪಟ್ಟಿದ್ದಾರೆ.
ಅವರು ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿ ಎಂದು ಹೇಳಲಾಗಿದ್ದು ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆಗೆ ಅಂತಾ ಬಿಮ್ಸ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆಗ ಅವರಿಗೆ ಕೋವಿಡ್ ತಪಾಸಣೆ ಮಾಡಿದಾಗ ಪಾಸಿಟಿವ್ ಎಂದು ಗೊತ್ತಾದ ತಕ್ಷಣವೇ ಕೋವಿಡ್ ವಾರ್ಡಗೆ ಸ್ಥಳಾಂತರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಚಿಕಿತ್ಸೆ ಫಲಿಸದ ಕಾರಣ ಅವರು ಮೃತಪಟ್ಟಿದ್ದಾರೆ.
ಕೋವಿಡ್ ನಿಯಮಾವಳಿ ಪ್ರಕಾರ ರಾತ್ರಿಯೇ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು.