ಚಿಕ್ಕೋಡಿ : ಕಾರ್ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಗಾಯಗೊಂಡ ಘಟನೆ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಕೊಲ್ಹಾಪುರ ಮಹಾಲಕ್ಷ್ಮಿ ಮಂದಿರಕ್ಕೆ ಮಿರಜ-ಜಮಖಂಡಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರನ್ನು ಮಿರಜ್ ಆಸ್ಪತ್ರೆಗೆ ಸೇರಿಸಲಾಗಿದೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.