Please assign a menu to the primary menu location under menu

Local News

ಗೋಕಾಕ, ಮೂಡಲಗಿ ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ


ಗೋಕಾಕ : ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಪ್ರವಾಹದಿಂದ ಗೋಕಾಕ ನಗರದ ಕೆಲವು ಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.

ಎರಡು ದಿನಗಳಿಂದ ಘಟಪ್ರಭಾ, ಮಾರ್ಕಂಡೇಯ ನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ಹಿಡಕಲ್ ಜಲಾಶಯ, ಧುಪದಾಳ ಮತ್ತು ಬಳ್ಳಾರಿ ನಾಲಾ ಜಲಾಶಯಗಳಿಂದ ಘಟಪ್ರಭಾ ನದಿಗೆ ನೀರು ಬಿಡಲಾಗುತ್ತಿದೆ. ಒಟ್ಟು 49 ಕ್ಯೂಸೆಕ್ಸ ನೀರು ಘಟಪ್ರಭಾ ನದಿಗೆ ಹರಿದು  ಬಂದು ಗೋಕಾಕದ ಹಳೆಯ ದನಗಳ ಮಾರುಕಟ್ಟೆ ಪ್ರದೇಶಕ್ಕೆ ನೀರು ನುಗ್ಗಿದೆ.

ಈಗಾಗಲೇ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಆರೇಳು ಸೇತುವೆಗಳು ಮುಳುಗಡೆಯಾಗಿದ್ದು, ಜನರು ಘಟಪ್ರಭಾ ನದಿ ದಡದ ಗ್ರಾಮಗಳ ಗ್ರಾಮಸ್ಥರು ಜಾಗರೂಕರಾಗಿರಬೇಕೆಂದು ಸಂಸತ್ ಸದಸ್ಯ ಈರಣ್ಣ ಕಡಾಡಿ ಮನವಿ ಮಾಡಿದ್ದಾರೆ.

ಹೊರಹರಿವು ಹೆಚ್ಚಿಸಿದರೆ ಪ್ರವಾಹವೂ ಹೆಚ್ಚಾಗಲಿದೆ. ಜತ್ತ– ಜಾಂಬೋಟಿ ಅಂತರರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆ ಯಾವುದೇ ಕ್ಷಣದಲ್ಲಿ ಮುಳುಗುವ ಭೀತಿ ಎದುರಾಗಿದ್ದು. ತಾಲ್ಲೂಕು ಆಡಳಿತದಿಂದ ಪರಿಶೀಲನೆ ನಡೆಸಲಾಗಿದೆ.

ಬೆಳಗಾವಿ ಜಿಲ್ಲೆಯ ಬಹುಪಾಲು ಕಡೆ ಸೋಮವಾರ ಕೂಡ ಧಾರಾಕಾರ ಮಳೆ ಮುಂದುವರಿದಿದೆ. ಚಿಕ್ಕೋಡಿ, ರಾಮದುರ್ಗ, ನಿಪ್ಪಾಣಿ ಹಾಗೂ ಖಾನಾಪುರ ತಾಲ್ಲೂಕುಗಳ ಒಟ್ಟು 20ಕ್ಕೂ ಹೆಚ್ಚು ಸೇತುವೆಗಳ ಮೇಲೆ ನದಿ ನೀರು ಹರಿಯುತ್ತಿದ್ದು, ಸಂಚಾರ ಬಂದ್ ಆಗಿದೆ.

ನವೀಲುತೀರ್ಥ ಜಲಾಶಯದಿಂದ ಕೂಡ ಮಲಪ್ರಭಾ ನದಿಗೆ 12.5 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಮುನವಳ್ಳಿ ಪಟ್ಟಣದೊಳಗಿನ ಹಳೆ ಸೇತುವೆ ಮುಳುಗಡೆಯಾಗಿದೆ. ರಾಮದುರ್ಗ ತಾಲ್ಲೂಕಿನ ನದಿ ತೀರದ ಗ್ರಾಮಗಳಲ್ಲಿ ಜನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.


Samadarshi News

Leave a Reply