ಬೆಂಗಳೂರು: ಮುರುಘಾಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ತನಿಖೆ ಬಳಿಕ ಎಲ್ಲಾ ಸತ್ಯಾಂಶ ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಘಾ ಶ್ರೀಗಳು ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸ ಇದೆ ಎಂದು ಹೇಳಿದರು.
ಈ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಪೋಕ್ಸೋ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಎರಡು ಪ್ರಕರಣಗಳನ್ನು ತನಿಖೆ ಮಾಡುತ್ತಿದ್ದಾರೆ. ತನಿಖೆ ದೃಷ್ಟಿಯಿಂದ ಈಗ ಮಾತನಾಡುವುದು ಸೂಕ್ತವಲ್ಲ ಎಂದು ಹೇಳಿದರು.