Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಮಾಜಿ ಸಂಸದ ಮುದ್ದ ಹನುಮೇಗೌಡ, ನಟ ಶಶಿಕುಮಾರ ಬಿಜೆಪಿಗೆ ಸೇರ್ಪಡೆ


ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದ್ದು, ಕಾಂಗ್ರೆಸ್ ನ ಹಲವು ನಾಯಕರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಮುದ್ದ ಹನುಮೇಗೌಡ, ನಟ ಶಶಿಕುಮಾರ, ನಿವೃತ್ತ ಐ ಎ ಎಸ್ ಅಧಿಕಾರಿ ಅನಿಲ ಕುಮಾರ, ಸೇವಾದಳ ರಾಜ್ಯ ಉಪಾಧ್ಯಕ್ಷ ಹನುಮಂತರಾವ ಜವಳಿ, ರಮೇಶ ಮುನಿಯಪ್ಪ, ವೆಂಕಟಾಚಲಯ್ಯ ಸೇರಿದಂತೆ ಹಲವು ನಾಯಕರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು. ಪಕ್ಷದ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್, ಬಿಜೆಪಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ ಜಿ.ವಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ ಸುರಾನ, ಸಚಿವರು, ಶಾಸಕರು ಮೊದಲಾದವರು ಉಪಸ್ಥಿತರಿದ್ದರು.


Leave a Reply