ಮಂಗಳೂರು: ಬುರ್ಖಾ ಧರಿಸಿ ಹಿಂದಿ ಐಟಂ ಸಾಂಗ್ ಗೆ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿದೆ.
ವಾಮಂಜೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಯಕ್ರಮದ ವೇಳೆ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಬಂದು ಐಟಂ ಸಾಂಗ್ ಗೆ ಹೆಜ್ಜೆ ಹಾಕಿದ್ದರು. ಅನುಮತಿಯಿಲ್ಲದೇ ಏಕಾಏಕಿ ಐಟಂ ಹಾಡಿಗೆ ಹೆಜ್ಜೆ ಹಾಕಿದ ಹಿನ್ನೆಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ಕಾಲೇಜು ಪ್ರಾಂಶುಪಾಲ ಡಾ.ಸುಧೀರ ಆದೇಶ ಹೊರಡಿಸಿದ್ದಾರೆ.
ಕಾಲೇಜಿನಲ್ಲಿ ಇಂತಹ ಹಾಡಿಗೆ ಅವಕಾಶ ನೀಡುವುದಿಲ್ಲ. ನಿಯಮ ಉಲ್ಲಂಘನೆ ಮಾಡಿ ಈ ರೀತಿ ಡ್ಯಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಮುಸ್ಲಿಂ ವಿದ್ಯಾರ್ಥಿಗಳ ಐಟಂ ಡಾನ್ಸ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮುಸ್ಲಿಂ ಸಮುದಾಯದಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.