ಬೆಳಗಾವಿ: ಚಿನ್ನದ ವ್ಯಾಪಾರಿಯನ್ನು ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ನಿಪ್ಪಾಣಿ ಪೊಲೀಸರು ಬಂಧಿಸಿದ್ದಾರೆ.
ಪ್ರದೀಪ ಕಾಂಬಳೆ (25), ಅವಧೂತ ಕೋಳಿ(25), ಅಕ್ಷಯ್ ಕೊಂಡಗೇರಿ(29), ಪಂಕಜ್ ಕೋಳಿ(25) ಎಂಬ ಬಂಧಿತ ಆರೋಪಿಗಳು.
ಬಂಧಿತರಿಂದ ಸುಲಿಗೆ ಮಾಡಿದ 75 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ ಸಹಿತ ಕೃತ್ಯಕ್ಕೆ ಬಳಸಿದ 2 ಬೈಕ್ಗಳು, 4 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ನಲ್ಲಿ ದೋಂಡಿರಾಮ್ ವಿಷ್ಣು ಕಾಂಬಳೆ ಎಂಬುವರಿಂದ ಚಿನ್ನ-ಬೆಳ್ಳಿ ಕದ್ದು ಆರೋಪಿಗಳು ಪರಾರಿಯಾಗಿದ್ದರು.