ಸಾಂಗಲಿ: ಮಕ್ಕಳ ಕಳ್ಳರೆಂದು ನಾಲ್ವರು ಸಾಧುಗಳ ಮೇಲೆ ಜನರ ಗುಂಪೊಂದು ಹಲ್ಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಲವಣ ಗ್ರಾಮದಲ್ಲಿ ಘಟನೆ ನಡೆದಿದೆ.
ವಿಡಿಯೋದಲ್ಲಿ, ಸಾಧುಗಳ ಮೇಲೆ ಜನರ ಗುಂಪೊಂದು ದೊಣ್ಣೆಗಳಿಂದ ಮನಬಂದಂತೆ ಥಳಿಸಿದ್ದಾರೆ. ಈ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ವೈರಲ್ ವೀಡಿಯೊಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸತ್ಯವನ್ನು ಪರಿಶೀಲಿಸುತ್ತಿದ್ದೇವೆ ಎಂದು ಸಾಂಗ್ಲಿ ಜಿಲ್ಲಾ ಪೊಲೀಸ ವರಿಷ್ಠ ದೀಕ್ಷಿತ ಗೆಡಮ್ ತಿಳಿಸಿದ್ದಾರೆ.
ಉತ್ತರ ಪ್ರದೇಶದ ನಾಲ್ವರು ಸಾಧುಗಳು ಬಿಜಾಪುರದಿಂದ ಪಂಢರಪುರಕ್ಕೆ ತೆರಳುತ್ತಿದ್ದಾಗ ಬಾಲಕನಿಗೆ ದಾರಿ ಕೇಳಿದ್ದಾರೆ. ಇದು ಮಕ್ಕಳನ್ನು ಅಪಹರಿಸುವ ತಂಡದಿಂದ ಬಂದಿರಬಹುದು ಎಂದು ಸ್ಥಳೀಯರು ಶಂಕಿಸಿ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಈ ಘಟನೆ ಬಗ್ಗೆ ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ ಕದಮ್ ಖಂಡಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.



