This is the title of the web page

ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುವಾಗ ಮೃತಪಟ್ಟ ವಿದ್ಯಾರ್ಥಿನಿ

ಮೈಸೂರು, ೨೮- ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಸಂದರ್ಭದಲ್ಲಿಯೇ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ನಡೆದಿದೆ.

ಮೈಸೂರಿನ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಈ ದುರ್ಘಟನೆ ಜರುಗಿದ್ದು ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾಳೆ.

ಪರೀಕ್ಷೆ ಬರೆಯುವ ವೇಳೆ ಅನುಶ್ರೀ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಶಿಕ್ಷಕರು ಮತ್ತು ಪರೀಕ್ಷಾ ಸಿಬ್ಬಂದಿ ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದರಾದರೂ ಆಕೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದರು.

ವಿದ್ಯಾರ್ಥಿನಿ ಹೃದಯಾಘಾತದಿಂದ ಆಕೆ ಅಸು ನೀಗಿದ್ದಾಳೆ ಎಂದು ಹೇಳಲಾಗಿದ್ದು ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮೃತ ವಿದ್ಯಾರ್ಥಿನಿ ಮರಣದ ಕಾರಣದ ವೈದ್ಯಕೀಯ ಪರೀಕ್ಷಾ ವರದಿ ಸಂಜೆ ವರೆಗೆ ಬರಲಿದೆ.

You might also like
Leave a comment