This is the title of the web page

ಗೋವಾ, ಕೇರಳ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಕಡ್ಡಾಯ ನಿಯಮ ರದ್ದು

ಬೆಂಗಳೂರು, 17- ದೇಶದಲ್ಲಿ ಕೋವಿಡ್ ಸೋಂಕು ಕಡಿಮೆಯಾಗಿರುವ ಕಾರಣ ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಎಂಬ ನಿಯಮವನ್ನು ರದ್ದುಗೊಳಿಸಲಾಗಿದೆ.

ಕೇರಳ ಮತ್ತು ಗೋವಾದಿಂದ ರೈಲ್ವೆ, ವಿಮಾನ ಹಾಗೂ ರಸ್ತೆ ಸಾರಿಗೆ ಮೂಲಕ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು ಆರ್ ಟಿ ಪಿ ಸಿ ಆರ್ ನೆಗೆಟಿವ್ ವರದಿಯನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಲ್ಲ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು ವರದಿಯನ್ನು ಹೊಂದಿರುವುದು ಕಡ್ಡಾಯವಲ್ಲ. ಆದರೆ ಅಂಥ ಪ್ರಯಾಣಿಕರು ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿರುವ ಬಗ್ಗೆ ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

“ಎಲ್ಲಾ ಸಾರಿಗೆ ವಿಧಾನಗಳ ಮೂಲಕ ಕೇರಳ ಮತ್ತು ಗೋವಾದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಇನ್ನು ಮುಂದೆ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಅಗತ್ಯವಿಲ್ಲ. ಕಳೆದ ವಾರ ಮಹಾರಾಷ್ಟ್ರದ ಪ್ರಯಾಣಿಕರಿಗೆ ಈ ವಿನಾಯಿತಿ ನೀಡಲಾಗಿದೆ. ಆದಾಗ್ಯೂ ಲಸಿಕೆ ಪ್ರಮಾಣಪತ್ರ ಕಡ್ಡಾಯವಾಗಿದೆ” ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ ಟ್ವೀಟ್ ಮಾಡಿದ್ದಾರೆ.

You might also like
Leave a comment