ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಧ್ಯಾನ ಕಡ್ಡಾಯ ಮಾಡಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು ಧ್ಯಾನ ಸಹಕಾರಿಯಾಗಿದ್ದು, ರಾಜ್ಯದ ಎಲ್ಲಾ-ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷಗಳ ಕಾಲ ಧ್ಯಾನ ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.
ಉತ್ತಮ ಗುಣಗಳನ್ನು ರೂಢಿಸಿಕೊಳ್ಳಲು ಧ್ಯಾನ ಅವಶ್ಯಕ. ವಿದ್ಯಾರ್ಥಿಗಳಿಗೆ ನಿತ್ಯ 10 ನಿಮಿಷ ಧ್ಯಾನ ಮಾಡಿಸಬೇಕು ಎಂದು ತಿಳಿಸಿದ್ದಾರೆ.
ಧ್ಯಾನಕ್ಕೆ ಅವಕಾಶ ಕಲ್ಪಿಸುವಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿತ್ತು. ಮನವಿಗೆ ಸ್ಪಂದಿಸಿದ ಸಚಿವರು ಶಾಲಾ-ಕಾಲೇಜುಗಳಲ್ಲಿ ಧ್ಯಾನ ಕಡ್ಡಾಯ ಮಾಡಿ ಆದೇಶ ಹೊರಡಿಸಿದ್ದಾರೆ.