Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿ ತಿಂಗಳು 100 ರೂ. ದೇಣಿಗೆ ಸಂಗ್ರಹಿಸಲು ಸರ್ಕಾರದ ನಿರ್ಧಾರ


ಬೆಂಗಳೂರು, ೨೧- ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದರ ನಡುವೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಪೋಷಕರಿಗೆ ಮತ್ತೊಂದು ಹೊರೆಯನ್ನು ಹೇರಲು ರಾಜ್ಯ ಸರ್ಕಾರ ಮುಂದಾಗಿದೆ.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು ಪ್ರಾಥಮಿಕ, ಪ್ರೌಢ ಶಾಲೆಗಳ ಅಗತ್ಯ ಖರ್ಚು ವೆಚ್ಚಗಳಿಗಾಗಿ ಮಕ್ಕಳ ಪೋಷಕರಿಂದ ಪ್ರತಿ ತಿಂಗಳು ನೂರು ರೂಪಾಯಿ ದೇಣಿಗೆ ಸಂಗ್ರಹಿಸಲು ನಿರ್ಧರಿಸಿದ್ದು, ಆದರೆ ಇದಕ್ಕೆ ಶಿಕ್ಷಣ ತಜ್ಞರಿಂದ ವಿರೋಧ ವ್ಯಕ್ತವಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಕೂಲಿ ಕಾರ್ಮಿಕರು, ಬಡವರ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಇಂತಹ ವಿದ್ಯಾರ್ಥಿಗಳ ಪೋಷಕರು ದಿನನಿತ್ಯದ ಜೀವನ ನಡೆಸಲು ಬವಣೆ ಪಡುತ್ತಿರುವಾಗ ಅವರಿಂದ ಪ್ರತಿ ತಿಂಗಳು ನೂರು ರೂಪಾಯಿಗಳನ್ನು ದೇಣಿಗೆ ರೂಪದಲ್ಲಿ ಪಡೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಲಾಗುತ್ತಿದೆ.


Leave a Reply