Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಹಿಂದುಳಿದ ವರ್ಗಗಳ ಪಟ್ಟಿಯಿಂದ ತಳವಾರ ಸಮುದಾಯ ಕೈಬಿಟ್ಟ ಸರ್ಕಾರ


ಬೆಂಗಳೂರು: ತಳವಾರ ಹಾಗೂ ಪರಿವಾರ ಸಮುದಾಯಗಳನ್ನು ಒಬಿಸಿ ಪಟ್ಟಿಯಿಂದ ತೆಗೆದುಹಾಕಲಾಗಿದ್ದು ಈ ಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರ 2020ರ ಮಾರ್ಚ 19ರಂದು ತಳವಾರ ಮತ್ತು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯಪತ್ರ ಹೊರಡಿಸಿತ್ತು. ಆದರೆ , ಕೆಲ ಗೊಂದಲಗಳು ಸೃಷ್ಟಿಯಾಗಿದ್ದವು. ಕೇಂದ್ರ ಸರಕಾರವು ಕಳೆದ ಮಾರ್ಚನಲ್ಲಿ ಪ್ರಕಟಿಸಿದ ಗೆಜೆಟಿಯನಲ್ಲಿ ನಾಯಕದ, ನಾಯಕ ಪರ್ಯಾಯ ಪದಗಳಾದ ಪರಿವಾರ ಹಾಗೂ ತಳವಾರ ಜಾತಿಗಳನ್ನು ಒಳಗೊಂಡಂತೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಪರಿಶಿಷ್ಟ ವರ್ಗದ ಜಾತಿ ಪ್ರಮಾಣ ಪತ್ರ ನೀಡಬಹುದು ಎಂದು ಹೇಳಿತ್ತು.

ನಂತರ ರಾಜ್ಯ ಸರ್ಕಾರ ಕಳೆದ ಜೂನ್‍ನಲ್ಲಿ ಹೊರಡಿಸಿದ ಸುತ್ತೋಲೆ ಹಾಗೂ ಆಗಸ್ಟನಲ್ಲಿ ಹೊರಡಿಸಿದ ಅಧಿಸೂಚನೆಯಲ್ಲಿ ಪರಿಶಿಷ್ಟ ಪಂಗಡದ ಪರಿವಾರ ಹಾಗೂ ತಳವಾರ ಜಾತಿಗಳಿಗೆ ಜಾತಿ ಪ್ರಮಾಣ ಪತ್ರ ನೀಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಲಾಗಿತ್ತು.

ಆದರೂ ಈ ವರ್ಗಗಳಿಗೆ ಸೇರಿದ ವ್ಯಕ್ತಿಗಳು ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಸ್ಪಷ್ಟನೆ ನೀಡಿತ್ತು, ವರ್ಗದ ಜಾತಿ ಪ್ರಮಾಣ ಪತ್ರ ನೀಡಬಹುದು ಎಂದು ಹೇಳಿತ್ತು.


A B Dharwadkar
the authorA B Dharwadkar

Leave a Reply