ಬೆಳಗಾವಿ: ಕರ್ನಾಟಕ ರಾಜ್ಯದ ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ..
ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ ಅವರು, ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ, ಕಾಶಿ ದೇವಸ್ಥಾನಗಳಿಗೆ ಮುಜರಾಯಿ ಇಲಾಖೆ ಅನುದಾನ ನೀಡಲಾಗುತ್ತಿದೆ. ಆದರೆ ನಮಗೆ ಸರಿಯಾಗಿ ಅನುದಾನ ನೀಡುತ್ತಿಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಕಿಡಿಕಾರಿದ್ದಾರೆ.
ದೇವಸ್ಥಾನ ನಿರ್ಮಾಣದಲ್ಲೂ ರಾಜಕಾರಣ ಸರಿಯಲ್ಲ . ನಮ್ಮ ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದ್ದು, ಅದರಲ್ಲಿ ನಾನು ಭಾಗವಹಿಸಿದ್ದಕ್ಕೆ ಬಿಜೆಪಿಯವರು ದೇವಸ್ಥಾನ ನಿರ್ಮಾಣಕ್ಕಾಗಿ ದೇಣಿಗೆ ಹಣ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.