Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಬ್ಯಾಗ್ ರಹಿತ ದಿನಕ್ಕೆ ಮಾರ್ಗಸೂಚಿ ಪ್ರಕಟ

school

ಬೆಂಗಳೂರು: ಪ್ರತಿ ತಿಂಗಳ ಒಂದು ಶನಿವಾರದಂದು ಬ್ಯಾಗ್ ರಹಿತ ದಿನವನ್ನಾಗಿ  ಆಚರಿಸುವಂತೆ ಘೋಷಣೆ ಮಾಡಲಾಗಿತ್ತು. ಇದೀಗ ಮುಂದುವರೆದು ಈ ಬ್ಯಾಗ್ ರಹಿತ ದಿನದ ಆಚರಣೆ ಸಂಬಂಧ ಶಾಲಾ ಶಿಕ್ಷಕರಿಗೆ  ಅನುಕೂಲವಾಗುವ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಈ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳು ಒಂದು ಶನಿವಾರದಂದು ಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನವನ್ನು ಆಚರಿಸಲು ಸೂಚಿಸಲಾಗಿದೆ ಎಂದಿದ್ದಾರೆ.

ಇನ್ನೂ ಬ್ಯಾಗ್ ರಹಿತ ದಿನದಂದು ವಿದ್ಯಾರ್ಥಿಗಳಿಗಾಗಿ ವಿವಿಧ 10 ವಿಷಯಗಳಲ್ಲಿ ಸ್ವಯಂ ವಿವರಣಾತ್ಮಕ ಚಿತ್ರ ಸಹಿತ ಚಟುವಟಿಕೆ ಪುಸ್ತಕಗಳನ್ನು ಹಾಗೂ ಅವುಗಳನ್ನು ತರಗತಿಗಳಲ್ಲಿ ನಿರ್ವಹಿಸಲು ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ ಎಂದಿದ್ದಾರೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಎಲ್ಲಾ ಶಿಕ್ಷಕರು ಕೈಪಿಡಿಯನ್ನು DSERT ವೆಬ್ ಸೈಟ್ https://dsert.kar.nic.in ಜಾಲತಾಣಕ್ಕೆ ಭೇಟಿ ನೀಡಿ, ಡೌನ್ ಲೋಡ್ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.


A B Dharwadkar
the authorA B Dharwadkar

Leave a Reply