Please assign a menu to the primary menu location under menu

National

ಗುಜರಾತ ಸರ್ಕಾರದ ಕ್ರಮ ಮನುಕುಲಕ್ಕೆ ಮಾಡಿದ ಅವಮಾನ -ಬಿಜೆಪಿ ನಾಯಕಿ ಖುಷಬೂ


ಚೆನ್ನೈ, ೨೫- ಖ್ಯಾತ ಚಿತ್ರನಟಿ ಮತ್ತು ತಮಿಳುನಾಡು ಬಿಜೆಪಿ ನಾಯಕಿ ಖುಷಬೂ ಅವರು ಗುಜರಾತ್‌ನ 2002 ರ ಬಿಲ್ಕಿಸ್ ಬಾನು ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳ ಬಿಡುಗಡೆ ಮತ್ತು ಸನ್ಮಾನವನ್ನು ಖಂಡಿಸಿದ್ದಾರೆ.

ಗುಜರಾತ್‌ನ ಬಿಜೆಪಿ ಸರ್ಕಾರ ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಅವಕಾಶ ಮಾಡಿಕೊಟ್ಟ ನಂತರ ಬಾನು ಪ್ರಕರಣದಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ. ತಮಿಳುನಾಡಿನ ಬಿಜೆಪಿ ನಾಯಕಿ ಖುಷ್ಬು ಸುಂದರ್ ಅವರು ಆಗಸ್ಟ್ 24 ರ ಬುಧವಾರ ಟ್ವಿಟ್ಟರ್‌ನಲ್ಲಿ ಅಪರಾಧಿಗಳ ಬಿಡುಗಡೆ “ಮನುಕುಲಕ್ಕೆ ಮಾಡಿದ ಅವಮಾನ” ಎಂದು ಹೇಳಿದ್ದಾರೆ.

“ಅತ್ಯಾಚಾರ, ಹಲ್ಲೆ, ಕ್ರೌರ್ಯ ಮತ್ತು ಜೀವಮಾನವಿಡೀ ಗಾಯವಾದ ಮಹಿಳೆಗೆ ನ್ಯಾಯ ಸಿಗಬೇಕು. ಅದರಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿ ಮುಕ್ತವಾಗಿ ಹೋಗಬಾರದು. ಹಾಗೆ ಮಾಡಿದರೆ ಅದು ಮನುಕುಲಕ್ಕೆ ಮತ್ತು ಹೆಣ್ಣಿಗೆ ಮಾಡಿದ ಅವಮಾನ. ಬಿಲ್ಕಿಸ್ ಬಾನು ಅಥವಾ ಅಂಥ ಯಾವುದೇ ಮಹಿಳೆಗೆ ರಾಜಕೀಯ ಮತ್ತು ಸಿದ್ಧಾಂತಗಳನ್ನು ಮೀರಿ ಬೆಂಬಲದ ಅಗತ್ಯವಿದೆ” ಎಂದು ಖುಷ್ಬು ಟ್ವೀಟ್ ಮಾಡಿದ್ದಾರೆ.

2002 ರ ಗುಜರಾತ್ ಕೋಮು ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಕುಟುಂಬದ ನಾಲ್ಕು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಏಳು ಕುಟುಂಬ ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಎಲ್ಲಾ 11 ಅಪರಾಧಿಗಳನ್ನು ಗೋಧ್ರಾ ಉಪ-ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಜೈಲಿನಿಂದ ಬಿಡುಗಡೆಯಾದ ನಂತರ ಅವರಿಗೆ ತಿಲಕ ಇಟ್ಟು ಹೂಮಾಲೆ ಹಾಕಿ, ಸಿಹಿ ಹಂಚಿ ಸ್ವಾಗತಿಸಲಾಯಿತು. ಕ್ಷಮಾದಾನ ನೀತಿಯಡಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅತ್ಯಾಚಾರದ ಅಪರಾಧಿಗಳನ್ನು ಬಿಡುಗಡೆ ಮಾಡಬಾರದು ಎಂದು ಕೇಂದ್ರ ಸರ್ಕಾರ ಸ್ಪಷ್ಟ ಮಾರ್ಗಸೂಚಿ ಹೊಂದಿದ್ದರೂ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಮೂಲಕ ಗುಜರಾತ್‌ನ ಬಿಜೆಪಿ ಸರ್ಕಾರ ತನ್ನ ಅಸೂಕ್ಷ್ಮತೆಯನ್ನು ಪ್ರದರ್ಶಿಸಿದೆ.


Samadarshi News

Leave a Reply