Please assign a menu to the primary menu location under menu

National

ಸುಪ್ರೀಮ ಕೋರ್ಟನಲ್ಲಿಂದು ಹಿಜಾಬ್ ಮೇಲ್ಮನವಿ ಅರ್ಜಿಗಳ ವಿಚಾರಣೆ 


ಹೊಸದಿಲ್ಲಿ: ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್ ನಿಷೇಧಿಸುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗಳನ್ನು  ಸುಪ್ರೀಮ ಕೋರ್ಟ ಇಂದು ವಿಚಾರಣೆ ನಡೆಸಲಿದೆ.

ನ್ಯಾಯಮೂರ್ತಿಗಳಾದ ಹೇಮಂತ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರು ಹಾಗೂ ಭಾರತದ ನೂತನ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ ಅವರ ಪೀಠ ಅರ್ಜಿಗಳ ವಿಚಾರಣೆ ನಡೆಸಲಿದೆ.

ಈ ಹಿಂದೆ ಅಂದಿನ ಸಿಜೆಐ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠದ ಮುಂದೆ ಹಲವಾರು ಸಂದರ್ಭಗಳಲ್ಲಿ ತುರ್ತು ವಿಚಾರಣೆಗಾಗಿ ಅರ್ಜಿಗಳನ್ನು ಉಲ್ಲೇಖಿಸಲಾಗಿತ್ತು, ಆದರೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಿರಲಿಲ್ಲ.

ಶಾಲಾ ಕಾಲೇಜುಗಳ ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ದೇಶಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ ಆದೇಶವನ್ನು ಪ್ರಶ್ನಿಸಿ ಸುಪ್ರೀಮ ಕೋರ್ಟನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ.


Samadarshi News

Leave a Reply