ರಾಜ್ಯದ ಕೆಲ ಜಿಲ್ಲೆಗಳಲ್ಲಿ ಜೋರು ಮಳೆ ನಿರೀಕ್ಷೆ

A B Dharwadkar
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಜೋರು ಮಳೆ ನಿರೀಕ್ಷೆ

ಬೆಂಗಳೂರು:ಕೆಲವು ದಿನಗಳಿಂದ ಮರೆಯಾಗಿದ್ದ ವರುಣನ ಆರ್ಭಟ ತುಸು ಜೋರಾಗಿದೆ ಹಿಮಾಚಲ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಕರ್ನಾಟಕದ ಕಲಬುರ್ಗಿ ಪ್ರದೇಶದಲ್ಲೂ ಧಾರಾಕಾರ ಮಳೆ ಸುರಿದಿದೆ.

ಕರ್ನಾಟಕದಾದ್ಯಂತ ಮಂಗಳವಾರದಿಂದ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬರಗಿ, ಗದಗ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಧಾರವಾಡ, ಹಾವೇರಿ,ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಕಕ್ಕೇರಿ, ಲಿಂಗಸುಗೂರು, ಇಳಕಲ್, ಹುಣಸಗಿಯಲ್ಲಿ ಭಾರಿ ಮಳೆಯಾಗಿದೆ. ಆಳಂದ, ಯಲಬುರ್ಗಾ, ಶೋರಾಪುರ, ಮಸ್ಕಿ, ಹುನಗುಂದ, ಗೌರಿಬಿದನೂರು, ತಾವರಗೇರಾ, ಶಿರಗುಪ್ಪ, ನಾರಾಯಣಪುರ, ಕೂಡಲಸಂಗಮ, ಕಾರವಾರ, ಶಾಹಪುರ, ನೆಲೋಗಿ, ನಾಲತವಾಡ, ಕುಷ್ಟಗಿಯಲ್ಲಿ ಮಳೆಯಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.