This is the title of the web page

ನ.25 ರವರೆಗೆ ಭಾರೀ ಮಳೆಯ ಮುನ್ಸೂಚನೆ

ಬೆಳಗಾವಿ, ನ.20(ಸಮದರ್ಶಿ ಸುದ್ದಿ ): ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ದಿನಾಂಕ:20.11.2021 ರಿಂದ 25.11.2021ರವರೆಗೆ
ಅತಿವೃಷ್ಟಿಯಾಗುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೋಶವು ಮುನ್ಸೂಚನೆ ನೀಡಿದೆ.

ಅತಿವೃಷ್ಟಿ ಸಾಧ್ಯತೆ ಇರುವುದರಿಂದ ನದಿ ಪಾತ್ರಗಳಲ್ಲಿರುವ ಜನರು ತಮ್ಮ ಅಗತ್ಯ ಸಾಮಗ್ರಿಗಳು ಮತ್ತು ಜಾನುವಾರುಗಳೊಂದಿಗೆ ಸುರಕ್ಷಿತ
ಪ್ರದೇಶಗಳಿಗೆ ತೆರಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ತಿಳಿಸಿದ್ದಾರೆ.

ಜನರು ಮತ್ತು ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಲ್ಲಿ ಜಿಲ್ಲಾಡಳಿತ ವತಿಯಿಂದ ಎಲ್ಲ ಅಗತ್ಯ ರೀತಿಯ ಸಹಕಾರ ನೀಡಲಾಗುವುದು.
ಜಿಲ್ಲಾಡಳಿತ/ತಾಲೂಕಾಡಳಿತವು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತೆಗೆದುಕೊಳ್ಳುವ ಎಲ್ಲ
ಕ್ರಮಗಳಿಗೆ ಸಾರ್ವಜನಿಕರೆಲ್ಲರೂ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

You might also like
Leave a comment