ಬೆಂಗಳೂರು : ಬಾಬಾ ಬುಡನ್ ಗಿರಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಹೈಕೋರ್ಟ ಆದೇಶ ನೀಡಿದೆ.
ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಪೂಜಾವಿಧಿ ನಡೆಸಲು ಮುಜಾವರ ಹಾಗೂ ಅರ್ಚಕರಿಗೆ ಅವಕಾಶ ನೀಡಲಾಗಿದೆ ಎಂದು ರಾಜ್ಯ ಸಂಪುಟ ನಿರ್ಧರಿಸಿತ್ತು.
ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸೈಯದ ಗೌಸ್ ಮೊಹಿಯುದ್ದೀನ ಶಾಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.
ಧಾರ್ಮಿಕ ವಿಧಿಗಳನ್ನು ನೆರವೇರಿಸಲು ಮುಜಾವರ ಜೊತೆ ಆಗಮಶಾಸ್ತ್ರ ಗೊತ್ತಿರುವ ಹಿಂದೂ ಅರ್ಚಕರನ್ನು ನೇಮಿಸಲು ಸರ್ಕಾರ ತೀರ್ಮಾನಿಸಿತ್ತು. ಈ ಸಂಬಂಧ ಕಳೆದ ಅಗಸ್ಟ 19 ರಂದು ಸುತ್ತೋಲೆ ಸಹ ಹೊರಡಿಸಿತ್ತು.
ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಪ್ರತಿನಿಧಿಗಳು ಇರುವ ವ್ಯವಸ್ಥಾಪನಾ ಸಮಿತಿ ರಚಿಸಬೇಕು. ಅರ್ಚಕ ಮತ್ತು ಮುಜಾವರ ಅವರನ್ನು ಈ ವ್ಯವಸ್ಥಾಪನಾ ಸಮಿತಿಯಿಂದಲೇ ನೇಮಿಸಬೇಕು ಎಂದು ಸೂಚನೆ ಸರ್ಕಾರ ನೀಡಿತ್ತು.