ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ ತಡೆಯಾಜ್ಞೆ ನೀಡಿದೆ.
15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. 15 ಸಾವಿರ ಹುದ್ದೆಗಳಿಗೆ 13,363 ಅಭ್ಯರ್ಥಿಗಳು ಮಾತ್ರವೇ ಆಯ್ಕೆಯಾಗಿದ್ದರು. ಇನ್ನೂ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಇಲ್ಲದೇ ಖಾಲಿ ಉಳಿದಿದ್ದವು.
ಶಿಕ್ಷಣ ಇಲಾಖೆ ಪ್ರಕಟಿಸಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಸಂಬಂಧ ಅಕ್ಷತ ಚೌಗಲೆ ಎಂಬುವರು ಹೈಕೋರ್ಟ ಮೆಟ್ಟಿಲೇರಿದ್ದರು. ಅವರ ಪರವಾಗಿ ಲತಾ ಶೆಟ್ಟಿ ಎಂಬುವಂತ ವಕೀಲರು ವಾದಿಸಿದ್ದರು.
ದಿನಾಂಕ 28-11-2022ರಂದು ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನು ಒಳಗೊಂಡಂತ ನ್ಯಾಯಪೀಠವು, ಮುಂದಿನ ಆದೇಶದವರೆಗೆ ದಿನಾಂಕ 18-11-2022ರಂದು ಪ್ರಕಟಿಸಿರುವ 1:1 ತಾತ್ಕಾಲಿಕ ಶಿಕ್ಷಕರ ಆಯ್ಕೆ ಪಟ್ಟಿಗೆ ತಡೆಯಾಜ್ಞೆಗೆ ಆದೇಶಿಸಿದ್ದಾರೆ.
ಅಂದ ಹಾಗೇ, 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ದಿನಾಂಕ 21-03-2022ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಆನ್ ಲೈನ್ ಮೂಲಕ ದಿನಾಂಕ 21-03-2022 ರಿಂದ 22-04-2022ರವರೆಗೆ ಅವಕಾಶ ನೀಡಲಾಗಿತ್ತು ಎಂದು ಶಿಕ್ಷಣ ಇಲಾಖೆ ಹೇಳಿತ್ತು.