This is the title of the web page

ಹಿಜಾಬ್ ಗೆ ಅವಕಾಶ ಇಲ್ಲ; ಹೈಕೋರ್ಟ ತೀರ್ಪು

ಬೆಂಗಳೂರು, 16- ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ ಎತ್ತಿ ಹಿಡಿದಿದೆ. ಸಮವಸ್ತ್ರ ಕಡ್ಡಾಯವಾಗಿರುವ ಶಾಲೆ, ಕಾಲೇಜುಗಳಲ್ಲಿ ಹಿಜಾಬಗೆ ಅವಕಾಶ ಇಲ್ಲ ಎಂದು ಹಿಜಾಬ್ ಪರವಾಗಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ ಆದೇಶ ನೀಡಿದೆ.

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ ಪೂರ್ಣ ಪೀಠದಿಂದ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಕಡ್ಡಾಯವಲ್ಲ ಎಂದು ನ್ಯಾಯಮೂರ್ತಿ ರಿತುರಾಜ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ​ ಅವರನ್ನು ಒಳಗೊಂಡ ಪೂರ್ಣ ಪೀಠ ಹೇಳಿದೆ.

ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದ್ದು ಸಮವಸ್ತ್ರದ ಜತೆ ಹಿಜಾಬ್​ಗೆ ಅನುಮತಿ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ಹೈಕೋರ್ಟ ಪೀಠ ವಜಾಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ 10ಕ್ಕೂ ಹೆಚ್ಚು ಮುಖ್ಯ ಅರ್ಜಿಗಳನ್ನು ಸತತ 11 ದಿನಗಳ ಕಾಲ 25 ತಾಸುಗಳಿಗೂ ಹೆಚ್ಚು ಸಮಯ ಹೈಕೋರ್ಟ​​ ವಿಚಾರಣೆ ನಡೆಸಿತ್ತು. ಅರ್ಜಿದಾರರು ಅಲ್ಲದೇ ಸರ್ಕಾರ, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕರು ಸೇರಿದಂತೆ ಉಳಿದ ಪ್ರತಿವಾದಿಗಳ ಪರವಾಗಿ ಒಟ್ಟು 25ಕ್ಕೂ ಹೆಚ್ಚು ವಕೀಲರು ತಮ್ಮ ವಾದವನ್ನು ಮಂಡಿಸಿದ್ದರು.

ತೀರ್ಪು ಬರುವ ಮೊದಲು ಗೃಹ ಸಚಿವ ಅರಗ ಜ್ಞಾನೇಂದ್ರ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇತ್ತ ಪೊಲೀಸರು ಸಹ ಶಾಲಾ-ಕಾಲೇಜುಗಳ ಬಳಿ ಪೊಲೀಸ್ ಬಂದೋಬಸ್ತ ಕೈಗೊಳ್ಳಲಾಗಿದೆ.

You might also like
Leave a comment