ಬೆಳಗಾವಿ : ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಸಾರಥಿ ನಗರದ ಮಸೀದಿಯು ಅಕ್ರಮವಾಗಿದ್ದು ಬರುವ ಸೋಮವಾರದೊಳಗೆ ತೆರವುಗೊಳಿಸದಿದ್ದರೆ ಅಯೋಧ್ಯೆಯ ಬಾಬರಿ ಮಸೀದಿಯನ್ನು ತೆರವುಗೊಳಿಸಿದಂತೆ ಹಿಂದೂಪರ ಸಂಘಟನೆಗಳು ತೆರವುಗೊಳಿಸಲಿವೆ ಎಂದು ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಸಾರಥಿ ನಗರದಲ್ಲಿ ನಡೆದ ಬಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಈ ಸಂಬಂಧ ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರನ್ನು ಭೆಟ್ಟಿ ಮಾಡಿದ ನಂತರ ಹೋರಾಟದ ರೂಪುರೇಷೆ ನಿರ್ಧರಿಸಲು ತೀರ್ಮಾನಿಸಲಾಯಿತು.
ಕಳೆದ ಒಂದು ವರ್ಷದಿಂದ ಮನೆಯನ್ನು ಮಸೀದಿಯನ್ನಾಗಿ ಪರಿವರ್ತಿಸಿಕೊಂಡರೂ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ಆಕ್ಷೇಪಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರದೊಳಗೆ ಅಕ್ರಮ ಮಸೀದಿ ತೆರವು ಮಾಡದಿದ್ದರೆ ಮೆರವಣಿಗೆ ಮೂಲಕ ತೆರಳಿ ಮಸೀದಿಯನ್ನು ಮಂದಿರವನ್ನಾಗಿ ಪರಿವರ್ತಿಸಲಾಗುವದೆಂದು ಅವರು ಹೇಳಿದ್ದಾರೆ.